ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ನೇತೃತ್ವದಲ್ಲಿ ಪೆಗಸಸ್​ ಗೂಢಾಚರ್ಯೆಯಲ್ಲಿ ಕೇಂದ್ರದ ಪಾತ್ರದ ತನಿಖೆ ಮಾಡುವಂತೆ ಒತ್ತಾಯಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲಾಯ್ತು. ರಾಜಭವನ ಮುತ್ತಿಗೆ ವೇಳೆ ಎಂಎಲ್​​ಸಿ ಬಿ.ಕೆ. ಹರಿಪ್ರಸಾದ್, ಶಾಸಕಿ ಅಂಜಲಿ ನಿಂಬಾಳ್ಕರ್, ಬಸನಗೌಡ ದದ್ದಲ್, ವಿ. ಮುನಿಯಪ್ಪ, ಎಂಎಲ್​ಸಿ ನಾರಾಯಣಸ್ವಾಮಿ, ತುಕರಾಂ, ಕೆ.ಸಿ. ಕೊಂಡಯ್ಯ, ರಾಮಲಿಂಗಾರೆಡ್ಡಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಭಾಗಿಯಾಗಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್​ ನಾಯಕರು ಘೋಷಣೆ ಕೂಗಿದರು. ಪೆಗಸಸ್ ಗೂಢಾಚರ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರಮುಖ ಪಾತ್ರವಿದೆ. ವಿರೋಧ ಪಕ್ಷಗಳನ್ನು ಟಾರ್ಗೆಟ್​ ಮಾಡಿ ಆದ್ಯತೆ ಮೇರೆಗೆ ಕೇಂದ್ರ ಗೂಢಚರ್ಯೆ ನಡೆಸುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿ ಇರಲು ಎಲ್ಲಾ ರಾಜ್ಯಗಳಲ್ಲಿ ವಿರೋಧ ಪಕ್ಷಗಳ ಸರ್ಕಾರಗಳನ್ನು ಕೆಡವಲು ಮುಂದಾಗಿತ್ತು ಎಂದು ಕಾಂಗ್ರೆಸ್​ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:  ಸಿಎಂ ಬದಲಾವಣೆ ಚರ್ಚೆ; ಮಧ್ಯಂತರ ಚುನಾವಣೆಗೆ ಕಾಂಗ್ರೆಸ್ ಸಿದ್ಧವಿದೆ ಎಂದ ಸಿದ್ದರಾಮಯ್ಯ

ಎಲ್ಲಾ ರಾಜ್ಯದಲ್ಲೂ ಅಧಿಕಾರ ಹಿಡಿಯಬೇಕು ಎಂದು ಬಿಜೆಪಿ ಪೆಗಸಸ್​​​​ ಅಸ್ತ್ರ ಪ್ರಯೋಗಿಸಿದೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ರಾಜಭವನ ಮುತ್ತಿಗೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ಗಾಂಧಿ ಪ್ರತಿಮೆಯಿಂದ ರಾಜಭವನದತ್ತ ಮತ್ತಿಗೆ ಹಾಕಲು ಹೊರಟ ರಾಜ್ಯ ಕಾಂಗ್ರೆಸ್ ನಾಯಕರನ್ನು ಪೊಲೀಸರು ಅರೆಸ್ಟ್​ ಮಾಡಿದರು.

The post ಪೆಗಸಸ್​​​​ ಬೇಹುಗಾರಿಕೆ ಆರೋಪ; ತನಿಖೆಗೆ ಆಗ್ರಹಿಸಿ ರಾಜಭವನ ಮುತ್ತಿಗೆ ಹಾಕಿದ ಕಾಂಗ್ರೆಸ್​ appeared first on News First Kannada.

Source: newsfirstlive.com

Source link