ಪೆಟ್ರೋಲ್ ಟ್ಯಾಂಕರ್ ಹರಿದು ವ್ಯಕ್ತಿ ಸ್ಥಳದಲ್ಲೆ ಸಾವು

ಗದಗ: ಪೆಟ್ರೋಲ್ ಟ್ಯಾಂಕರ್ ವಾಹನ ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಜಿಲ್ಲಾಡಳಿತ ಭವನದ ಎದುರಿಗೆ ಈ ದುರ್ಘಟನೆ ನಡೆದಿದೆ. ಮೃತ ವ್ಯಕ್ತಿ ಒಕ್ಕಲಗೇರಿ ಓಣಿಯ 32 ವರ್ಷದ ಮಹಾದೇವಪ್ಪ ಕುಂಬಾರ ಎಂದು ಗುರುತಿಸಲಾಗಿದೆ. ಈ ಟ್ಯಾಂಕರ್ ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಕೊಪ್ಪಳಕ್ಕೆ ಹೊರಟಿತ್ತು ಎನ್ನಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೈಕಲ್ ಮೇಲೆ ಮನೆಗೆ ಕಟ್ಟಿಗೆ ಒಯ್ಯುತ್ತಿದ್ದ ವ್ಯಕ್ತಿಯ ಮೇಲೆ ಟ್ಯಾಂಕರ್ ಹರಿದಿದ್ದು, ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅವಘಡ ನಡೆದಿದೆ. ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಪೆಟ್ರೋಲ್ ಟ್ಯಾಂಕರ್ ಹರಿದು ವ್ಯಕ್ತಿ ಸ್ಥಳದಲ್ಲೆ ಸಾವು appeared first on Public TV.

Source: publictv.in

Source link