ಮಂಗಳೂರು: ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಇತಿಹಾಸದಲ್ಲಿ ನೋಡದ ಸಾಧನೆ ಈ ಮೂಲಕ ಆಗಿದೆ. ಪೆಟ್ರೋಲ್ ಡಿಸೇಲ್ ನಲ್ಲಿ ಶತಕ ಬಾರಿಸುವ ಮೂಲಕ ಕೇಂದ್ರ ಸರ್ಕಾರ ಸಾಧನೆಯನ್ನು ಮಾಡಿದೆ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರಕ್ಕೆ ಸ್ಪಷ್ಟವಾದ ಆರ್ಥಿಕ ನೀತಿ ಇಲ್ಲ, ಪೆಟ್ರೋಲ್ ಟ್ಯಾಕ್ಸ್ ಮೂಲಕ ಖಜಾನೆ ತುಂಬುತ್ತಿದ್ದಾರೆ. ಪೆಟ್ರೋಲ್ ಡಿಸೇಲ್ ಖರೀದಿಸಲು ಜನ ಕೆಲಸಕ್ಕೆ ಹೋಗುವಂತಾಗಿದೆ ಎಂದು ಕಿಡಿಕಾರಿದರು.

The post ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ: ಖಾದರ್ appeared first on Public TV.

Source: publictv.in

Source link