ನವದೆಹಲಿ: ತೈಲ ಬೆಲೆ ಏರಿಕೆ ಸಂಬಂಧ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಷ್ಟುದಿನ ತೈಲ ಬೆಲೆ ಏರಿಕೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದ ಸಾಮಾನ್ಯರ ಜೀವನ ಸಂಕಷ್ಟಕ್ಕೆ ತಿರುಗಿದೆ ಅಂತ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸುತ್ತಿದ್ರು.
ಈ ಮಧ್ಯೆ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ನಂತರ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ’ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ये दिल से नहीं डर से निकला फैसला है।
वसूली सरकार की लूट को आने वाले चुनाव में जवाब देना है।#PetrolDieselPrice
— Priyanka Gandhi Vadra (@priyankagandhi) November 4, 2021