ಬೆಂಗಳೂರು: ಪೇಜಾವರ ಶ್ರೀ ಕುರಿತಂತೆ ಖ್ಯಾತ ಸಂಗೀತ ನಿರ್ದೇಶಖ ಹಂಸಲೇಖ ಅವರು ನೀಡಿರುವ ಹೇಳಿಕೆ ವಿಚಾರವಾಗಿ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಸದ್ಯ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆ ನೀಡಿರೋ ಹಂಸಲೇಖ ಅವರು, ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಂಸಲೇಖರ ಹೇಳಿಕೆಯನ್ನು ಖಂಡಿಸಿದ್ದ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವಿಪ್ರ ಯುವ ವೇದಿಕೆ ಅವರ ವಿರುದ್ಧ ದೂರು ದಾಖಲಿಸಿತ್ತು. ಅಲ್ಲದೇ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಪ್ರತ್ಯೇಕವಾಗಿ ದೂರು ಸಲ್ಲಿಕೆ ಮಾಡಿತ್ತು. ಈ ಕುರಿತು ವಿಚಾರಣೆ ನಡೆಸಲು ಬಸವನಗುಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ ಮೊದಲ ನೋಟಿಸ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.
ಇದನ್ನೂ ಓದಿ: ಕಾಯ್ದೆ ಮುಂದೆ ಯಾರೂ ದೊಡ್ಡವರಲ್ಲ, ಹಂಸಲೇಖ ವಿರುದ್ಧವೂ ಕಾನೂನಿನ ಕ್ರಮ -ಗೃಹ ಸಚಿವ
ಸದ್ಯ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆ ಹಂಸಲೇಖ ಅವರು, ಅನಾರೋಗ್ಯ ಹಿನ್ನಲೆ ವಿಚಾರಣೆಗೆ ಹಾಜರಾಗಲು ಸಮಯ ಕೊಡುವಂತೆ ಮನವಿ ಮಾಡಿದ್ದಾರೆ. ಹಂಸಲೇಖ ಮನವಿ ಪುರಸ್ಕರಿಸಿ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ನೀಡಿದ್ದಾರೆ. ದೂರಿನ ಸಂಬಂಧ ಸೋಮವಾರ ವಿಚಾರಣೆಗೆ ಹಾಜರಾಗೋದಾಗಿ ಹಂಸಲೇಖ ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಪೇಜಾವರ ಶ್ರೀಗಳು ದಲಿತರ ಮನೆಯಲ್ಲಿ ಕೋಳಿ ತಿಂತಾರಾ? ಕುರಿ ರಕ್ತ ಕುಡಿತಾರಾ? ಹಂಸಲೇಖ ಪ್ರಶ್ನೆ
The post ಪೇಜಾವರ ಶ್ರೀಗಳ ಕುರಿತ ಹೇಳಿಕೆ: ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ ಹಂಸಲೇಖ appeared first on News First Kannada.