ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣ ಅವರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ಪೇಜಾವರ ಶ್ರೀಗಳ ಕುರಿತು ಹಂಸಲೇಖ ಅವರು ನೀಡಿರುವ ಹೇಳಿಕೆ ಕುರಿತು ಕಮಿಷನರ್ಗೆ ದೂರು ನೀಡಿರುವ ಕೃಷ್ಣ ಅವರು, ಪ್ರಥಮ ಹಂತದಲ್ಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ನಂತರ ರಸ್ತೆಗಿಳಿದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ವಿದ್ಯಾಪೀಠ ಸರ್ಕಲ್ ಬಳಿ ಇರುವ ಶ್ರೀಗಳ ಬೃಂದಾವನದ ಮುಂದೆ ಬಂದು ಹಂಸಲೇಖ ಕ್ಷಮೆ ಕೇಳಬೇಕು. ಬಹಿರಂಗ ಹೇಳಿಕೆ ನೀಡಿ ನಾಲ್ಕು ಗೋಡೆ ಮುಂದೆ ಕ್ಷಮೆ ಕೇಳೋದಲ್ಲ.. ಬೃಂದಾವನದ ಮುಂದೆಯೇ ಕ್ಷಮೆ ಕೇಳಬೇಕು. ಎಲ್ಲಿ ಅಪಮಾನ ಆಗಿದ್ಯೋ ಅಲ್ಲಿಯೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಕ್ಷಮೆ ಕೇಳಲಿಲ್ಲ ಎಂದರೇ ಕಾನೂನು ಕ್ರಮಕ್ಕೆ ಒತ್ತಾಯ ಮಾಡುತ್ತೇವೆ ಎಂದರು.