ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಪೊಲೀಸರು ಕೊಲೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.

ಆರೋಪಿ ಮೊಹಮ್ಮದ್ ಸಲೀಂ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದ ಗೋವಿಂದಪುರ ಪೊಲೀಸರ ಮೇಲೆಯೇ ಆರೋಪಿ ದಾಳಿ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ಪ್ರಕಾಶ್ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಸಲೀಂ, ಅಲಿ ಎಂಬವರನ್ನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಈ ಸಂಬಂಧ ಗೋವಿಂದ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಂತೆಯೇ ಇಂದು ಆರೋಪಿ ಗೋವಿಂದಪುರ ಠಾಣಾ ವ್ಯಾಪ್ತಿ ರೈಲ್ವೆ ಹಳಿ ಬಳಿ ಇದ್ದಾನೆ ಅನ್ನೋ ಮಾಹಿತಿ ಪೊಲೀಸರಿಗೆ ತಿಳಿದು ಬಂತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ತೆರಳಿದ್ದಾರೆ.

ಈ ವೇಳೆ ಆರೋಪಿ ಸಲೀಂ, ಪೇದೆಯೊಬ್ಬರಿಗೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಹೀಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಹೆಚ್ಚಾದ ‘ಸಿಎಂ’ ಸೀಟ್ ಫೈಟ್- ‘ಹೈ’ ವಾರ್ನಿಂಗ್ ಮಧ್ಯೆಯೂ ಶಾಸಕರು ಡೋಂಟ್‍ಕೇರ್..!

The post ಪೇದೆ ಮೇಲೆ ಹಲ್ಲೆಗೈದು ಪರಾರಿಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು appeared first on Public TV.

Source: publictv.in

Source link