ಬೆಂಗಳೂರು: ನಗರದಲ್ಲಿ ಆ್ಯಂಬುಲೆನ್ಸ್, ಬೆಡ್, ಆಕ್ಸಿಜನ್, ಸೂಕ್ತ ಸಮಯದಲ್ಲಿ ಸಿಗದೇ ಕೊರೊನಾ ಸೊಂಕಿತರು ನರಳಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಅದೆಷ್ಟೋ ಜನ ಚಿಕಿತ್ಸೆ ಸಿಗೋ ಮುನ್ನವೇ ಮೃತಪಟ್ಟಿದ್ದಾರೆ. ಹೀಗಾಗಿ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಪೊಲೀಸ್​ ಸಿಬ್ಬಂದಿಗಾಗಿ ಬೆಂಗಳೂರಿನ ವೈಟ್ ಫೀಲ್ಡ್ ವಿಭಾಗದ ಪೊಲೀಸರಿಂದ ಕೊವಿಡ್ ಸೆಂಟರ್ ತೆರೆಯಲಾಗಿದೆ.

ಕಾಡುಗೋಡಿಯ ನೂತನ ಪೊಲೀಸ್ ಕ್ವಾರ್ಟರ್ಸ್​​ನಲ್ಲಿ ಕೊವಿಡ್ ಕೇರ್ ಸೆಂಟರ್ ನಿರ್ಮಾಣವಾಗಿದ್ದು, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಉದ್ಘಾಟನೆ ಮಾಡಿದ್ರು. ಸೊಂಕಿತ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗಾಗಿ ಇದನ್ನ ನಿರ್ಮಿಸಲಾಗಿದ್ದು, ಸುಮಾರು 50 ಬೆಡ್​ಗಳ ವ್ಯವಸ್ಥೆ ಇದೆ. ಸ್ಮೈಲ್ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರು ರೋಗಿಗಳ ಆರೋಗ್ಯದ ಮೇಲೆ ನಿಗಾ ಮಾಡಲಿದ್ದಾರೆ.

ನ್ಯೂಸ್​ಫಸ್ಟ್​ ಕಳಕಳಿ
ಕೊರೊನಾದಿಂದ ರಕ್ಷಿಸಿಕೊಳ್ಳಲು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ. ಮಾಸ್ಕ್ ಧರಿಸಿ, ಸೋಶಿಯಲ್ ಡಿಸ್ಟನ್ಸ್ ಕಾಪಾಡಿ. ಕೈ ತೊಳೆಯುತ್ತಿರಿ. ಮತ್ತು ಮೇ 1 ರಿಂದ 18ರ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಅರ್ಹರಾಗಿದ್ದು ರೆಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಅದಕ್ಕಾಗಿ https://www.cowin.gov.in/  ಇಲ್ಲಿಗೆ ಭೇಟಿ ಕೊಟ್ಟು ನೊಂದಣಿ ಮಾಡಿಕೊಳ್ಳಿ. ಮತ್ತೊಂದು ಮುಖ್ಯ ಸಂಗತಿ ಗಮನಿಸಿ CoWin ಆ್ಯಪ್ ಸಾರ್ವಜನಿಕರಿಗೆ ಅಲ್ಲ. ಹೀಗಾಗಿ ಕಡ್ಡಾಯವಾಗಿ ವೆಬ್​ಸೈಟ್​ನಲ್ಲಿಯೇ ನೊಂದಾಯಿಸಿಕೊಳ್ಳಬೇಕು.

The post ಪೊಲೀಸ್​ ಸಿಬ್ಬಂದಿಗಾಗಿ ಕಾಡುಗೋಡಿಯಲ್ಲಿ ಕೋವಿಡ್ ಕೇರ್ ಸೆಂಟರ್ appeared first on News First Kannada.

Source: newsfirstlive.com

Source link