ಕೋಲಾರ: ಮಗು ಅಪಹರಣ ಪ್ರಕರಣದಲ್ಲಿ ಪೊಲೀಸರ ವಿಚಾರಣೆಗೆ ಹೆದರಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ನಡೆದಿದೆ.
ಗಂಗೋತ್ರಿ (17), ಮುನಿಯಪ್ಪ (7೦), ನಾರಾಯಣಮ್ಮ (65), ಪುಷ್ಪ (35), ಬಾಬು (45) ಆತ್ಮಹತ್ಯೆಗೆ ಯತ್ನಿಸಿದವರು. ಮಗು ಅಪಹರಣ ಪ್ರಕರಣದಲ್ಲಿ ಕುಟುಂಬದ ವಿರುದ್ಧ ಆರೋಪ ಕೇಳಿ ಬಂದಿದ್ದು, ಪೊಲೀಸ್ ವಿಚಾರಣೆಗೆ ಹೆದರಿದ ಕುಟುಂಬಸ್ಥರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಇನ್ನು ವಿಷ ಸೇವಿಸಿದ ಐವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.