ಪ್ರಗತಿಪರ ಶಾಸಕರೆಂದೇ ಖ್ಯಾತಿ ಪಡೆದಿದ್ದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಹೃದಯಾಘಾತದಿಂದ ವಿಧಿವಶ | Former MLA GV Sriramareddy passed away at 67 chikkaballapur


ಪ್ರಗತಿಪರ ಶಾಸಕರೆಂದೇ ಖ್ಯಾತಿ ಪಡೆದಿದ್ದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಹೃದಯಾಘಾತದಿಂದ ವಿಧಿವಶ

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ

ಚಿಕ್ಕಬಳ್ಳಾಪುರ: ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ(67) ವಿಧಿವಶರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮನೆಯಲ್ಲಿ ಬೆಳಗ್ಗೆ 6.45ಕ್ಕೆ ಹೃದಯಾಘಾತದಿಂದ ಕುಸಿದುಬಿದ್ದು ಜಿ.ವಿ.ಶ್ರೀರಾಮರೆಡ್ಡಿ ನಿಧನರಾಗಿದ್ದಾರೆ. ತಕ್ಷಣವೇ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಶ್ರೀರಾಮರೆಡ್ಡಿ ನಿಧನರಾಗಿರುವ ಬಗ್ಗೆ ಬೆಳಗ್ಗೆ 7.28ಕ್ಕೆ ವೈದ್ಯರು ಮಾಹಿತಿ ನೀಡಿದ್ದಾರೆ.

ಸಿಪಿಐಎಂ ಪಕ್ಷದಿಂದ ಎರಡು ಭಾರಿ ಶಾಸಕರಾಗಿದ್ದ ಶ್ರೀರಾಮರೆಡ್ಡಿ ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದರು. ಇತ್ತೀಚೆಗೆ CPIM ಪಕ್ಷ ತೊರೆದು ತಮ್ಮದೆ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿದ್ರು. ಸಾಮಾಜಿಕ ಹೋರಾಟ ಆರಂಭಿಸಿದ್ದರು. ಸಮಾಜದ ಸುಧಾರಣೆಗಾಗಿ ತಮ್ಮನ್ನು ತಾವೇ ಅರ್ಪಿಸಿಕೊಂಡಿದ್ರು. ಜಿ.ವಿ.ಎಸ್ ನಿಧನದಿಂದ ಅಪಾರ ಬೆಂಬಲಿಗರಲ್ಲಿ ದುಃಖ ಮಡುಗಟ್ಟಿದೆ. ಆಸ್ಪತ್ರೆ ಬಳಿ ಬೆಂಬಲಿಗರು ಜಮಾಹಿಸುತ್ತಿದ್ದಾರೆ.

TV9 Kannada


Leave a Reply

Your email address will not be published. Required fields are marked *