ಪ್ರತಾಪ್ ಸಿಂಹ ಹೇಳಿಕೆಯನ್ನು ವಕೀಲರ ಸಂಘ ಗಂಭೀರವಾಗಿ ಪರಿಗಣಿಸಬೇಕು: ಎಂ.ಲಕ್ಷ್ಮಣ | Pratap Singh’s statement about lawyers should be taken seriously by lawyers said M.Laxmana


ಪ್ರತಾಪ್ ಸಿಂಹ ಹೇಳಿಕೆಯನ್ನು ವಕೀಲರ ಸಂಘ ಗಂಭೀರವಾಗಿ ಪರಿಗಣಿಸಬೇಕು: ಎಂ.ಲಕ್ಷ್ಮಣ

ಎಂ.ಲಕ್ಷ್ಮಣ

ವಕೀಲ ಗಿರಿ ಮಾಡಿಕೊಂಡಿದ್ದ ಸಿದ್ದರಾಮಯ್ಯ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ, ಪ್ರತಾಪ್ ಸಿಂಹರಿಂದ ವಕೀಲರಿಗೆ ಅವಮಾನ ಆಗಿದೆ. ವಕೀಲರ ಸಂಘಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

ಮೈಸೂರು: ವಕೀಲ ಗಿರಿ ಮಾಡಿಕೊಂಡಿದ್ದ ಸಿದ್ದರಾಮಯ್ಯ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ (Prathap Simha) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ (M.Lakshman), ಸಿದ್ದರಾಮಯ್ಯ (Siddaramaiah) ಬಗ್ಗೆ ಸಂಸದ ಪ್ರತಾಪ್ ಸಿಂಹ ಕೇವಲವಾಗಿ ಮಾತನಾಡಿದ್ದಾರೆ. ವಕೀಲರ ಸಂಘಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚು ಅನುದಾನ ಬಂದಿಲ್ಲ ಹಾಗೂ ತೆರಿಗೆ ಬಾಕಿ ನೀಡಿಲ್ಲ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಇದಕ್ಕೆ ಶನಿವಾರ ಸುದ್ದಿಗೋಷ್ಠಿ ನಡೆಸಿದ್ದ ಪ್ರತಾಪ್ ಸಿಂಹ ಅವರು, ವಕೀಲಗಿರಿ ಮಾಡುತ್ತಿದ್ದ ಸಿದ್ದರಾಮಯ್ಯ ಅವರಿಗೆ ದೇಶದ ಆರ್ಥಿಕತೆ ಬಗ್ಗೆ ಹೇಗೆ ಗೊತ್ತಾಗುತ್ತದೆ? 13 ಬಾರಿ ಬಜೆಟ್ ಮಂಡಿಸಿರುವುದಾಗಿ ಹೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ತೆರಿಗೆ ವ್ಯವಸ್ಥೆಯ ಕನಿಷ್ಠ ಜ್ಞಾನ ಇಲ್ಲದೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಸಂಸದರ ಈ ಟೀಕೆಗೆ ಇಂದು ಲಕ್ಷ್ಮಣ ಅವರು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

TV9 Kannada


Leave a Reply

Your email address will not be published.