5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ರೆ ಹೋರಾಟ ಮಾಡ್ತೇವೆ ಎಂದಿದ್ದ ಪ್ರತಾಪ್ಸಿಂಹ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಪ್ರಧಾನಿ ಪ್ರತಿಯೊಬ್ಬರಿಗೂ 15 ಲಕ್ಷ ನೀಡುವುದಾಗಿ ಹೇಳಿದ್ರು. ಎಲ್ಲರ ಖಾತೆಗೂ ಹಣ ಹಾಕಿದ್ರಾ ಅಂತಾ ರಾಮಲಿಂಗಾರೆಡ್ಡಿ ಪ್ರಶ್ನೆ ಮಾಡಿದ್ದಾರೆ.

ರಾಮಲಿಂಗಾರೆಡ್ಡಿ
ಬೆಂಗಳೂರು: ಗ್ಯಾರಂಟಿಗಳ ಜಾರಿ ಬಗ್ಗೆ ಜೂನ್ 1ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೆ ಗ್ಯಾರಂಟಿಗಳನ್ನು ಜಾರಿಮಾಡಬೇಕು(Congress Guarantee). ಒಂದು ವೇಳೆ ಷರತ್ತು ವಿಧಿಸಿದರೆ ಜೂನ್ 1ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ(Prathap Simha) ಎಚ್ಚರಿಕೆ ನೀಡಿದ್ದರು. ಸದ್ಯ ಈ ಬಗ್ಗೆ ನೂತನ ಸಚಿವ ರಾಮಲಿಂಗಾರೆಡ್ಡಿ(Ramalinga Reddy) ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಯಾವ ಪ್ರತಿಭಟನೆ ಮಾಡುವುದು ಬೇಕಿಲ್ಲ. ಎಲ್ಲ ಬೇಡಿಕೆ ಈಡೇರಿಸುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ನೂತನ ಸಚಿವ ರಾಮಲಿಂಗಾರೆಡ್ಡಿ ಅವರು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಯಾವ ಪ್ರತಿಭಟನೆ ಮಾಡುವುದು ಬೇಕಿಲ್ಲ. ನಮ್ಮ ಸರ್ಕಾರ ಬಂದು ಒಂದು ವಾರ ಆಗಿದೆ. ನಾವು ಎಲ್ಲ ಬೇಡಿಕೆ ಈಡೇರಿಕೆ ಮಾಡ್ತೀವಿ. ಕಳೆದ ಬಿಜೆಪಿ ಸರ್ಕಾರ 600 ಭರವಸೆ ನೀಡಿತ್ತು ಇದರಲ್ಲಿ 60 ಅಷ್ಟೇ ಈಡೇರಿಸಿದೆ. ಪ್ರಧಾನಿ ಪ್ರತಿಯೊಬ್ಬರಿಗೂ $15 ಲಕ್ಷ ನೀಡುವುದಾಗಿ ಹೇಳಿದ್ರು. ಎಲ್ಲರ ಖಾತೆಗೂ ಹಣ ಹಾಕಿದ್ರಾ ಅಂತಾ ರಾಮಲಿಂಗಾರೆಡ್ಡಿ ಪ್ರಶ್ನೆ ಮಾಡಿದ್ದಾರೆ.