ಕೆಸಿಆರ್ ಈ ಹಿಂದೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಮ್ಮ ನಿರ್ಧಾರವು ತೆಲಂಗಾಣ ಸೇರಿದಂತೆ ರಾಜ್ಯಗಳ ವಿರುದ್ಧ ಕೇಂದ್ರದ ಘೋರ ತಾರತಮ್ಯದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿದೆ ಎಂದಿದ್ದಾರೆ.

ನೀತಿ ಆಯೋಗ ಸಭೆ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯುತ್ತಿರುವ ಸರ್ಕಾರದ ಚಿಂತಕರ ಚಾವಡಿ ನೀತಿ ಆಯೋಗದ ಏಳನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ಈ ಸಭೆಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರು ಹಾಜರಾಗಿದ್ದಾರೆ. ಕೆಸಿಆರ್ ಈ ಹಿಂದೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಮ್ಮ ನಿರ್ಧಾರವು ತೆಲಂಗಾಣ ಸೇರಿದಂತೆ ರಾಜ್ಯಗಳ ವಿರುದ್ಧ ಕೇಂದ್ರದ ಘೋರ ತಾರತಮ್ಯದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿದೆ ಎಂದಿದ್ದಾರೆ. ಕೊವಿಡ್ ನಿಂದ ಚೇತರಿಸಿಕೊಂಡಿರುವ ನಿತೀಶ್ ಕುಮಾರ್, ಒಂದು ತಿಂಗಳಲ್ಲಿ ಎರಡನೇ ಬಾರಿ ಪ್ರಧಾನಿ ನೇತೃತ್ವದ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)