ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಭೇಟಿ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು.. ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡಿದೆ.. ಮೇಕೆದಾಟು ಸೇರಿ ಎಲ್ಲ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ರಾಜ್ಯಕ್ಕೆ ಹೆಚ್ಚಿನ ಅನುದಾನ ಕೇಳಿದ್ದೇನೆ.. ಸಕಾರಾತ್ಮಕವಾಗಿ ಸ್ಪಂದಿಸಿ ಎಲ್ಲದಕ್ಕೂ ಒಪ್ಪಿಗೆ ಕೊಟ್ಟಿದ್ದಾರೆ. ಪಿಎಂ ಸಭೆ ಬಗ್ಗೆ ವಿವರವಾಗಿ ನಾಳೆ‌ ಹೇಳುತ್ತೇನೆ ಎಂದಿದ್ದಾರೆ. ಅಲ್ಲದೇ ನಾಯಕತ್ವ ಬದಲಾವಣೆ ಬಗ್ಗೆ ನಂಗೆ ಗೊತ್ತಿಲ್ಲ ಎಂದು ಬಿಎಸ್‌ವೈ ನಗುತ್ತಾ ಉತ್ತರಿಸಿದ್ದಾರೆ. ರಾತ್ರಿ ರಾಜ್ಯದ ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.

 

The post ಪ್ರಧಾನಿ ಮೋದಿ ಭೇಟಿಯಾದ ಬಿಎಸ್​ವೈ; ‘ಮೇಕೆದಾಟು’ ವಿಚಾರ ಚರ್ಚಿಸಿದ್ದೇನೆ ಎಂದ ಸಿಎಂ appeared first on News First Kannada.

Source: newsfirstlive.com

Source link