ಬಸವರಾಜ್ ಬೊಮ್ಮಾಯಿ (ಸಂಗ್ರಹ ಚಿತ್ರ)
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು 100 ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ. ಇದೇ ವೇಳೆ ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಿದೆ. 2 ಕಾರ್ಯಕ್ರಮ ಮಾಡಿ ಬರುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಟ್ಕಾಯಿನ್ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದ ಪ್ರಧಾನಿ ಮೋದಿ:
ಇನ್ನು ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್ಕಾಯಿನ್ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆಯಾಗಿಲ್ಲ, ನಾನೇ ಪ್ರಸ್ತಾಪಿಸಲು ಯತ್ನಿಸಿದಾಗ ಮೋದಿಯವರು ತಡೆದರು, ಬಿಟ್ ಕಾಯಿನ್ ಬಗ್ಗೆ ನನಗಿಂತ ಹೆಚ್ಚಿನ ಮಾಹಿತಿ ಅವರಿಗಿದೆ. ಇದೆಲ್ಲವೂ ಸಹಜ, ಅದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು.
(karnataka cm basavaraj bommai meets pm narendra modi in delhi and invites him to bangalore)