ಪ್ರವಾದಿ ಮೊಹ್ಮದರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ: ಬೆಳಗಾವಿಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದ ಮೂವರ ಬಂಧನ | Nupur Sharma’s statement against the Prophet Mohammed: Replica in Belgaum Arrest of three who hanged


ಪ್ರವಾದಿ ಮೊಹ್ಮದರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ: ಬೆಳಗಾವಿಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದ ಮೂವರ ಬಂಧನ

ನೂಪುರ್ ಶರ್ಮಾ ಅಣಕು ಪ್ರತಿಕೃತಿ ನಡುರಸ್ತೆಯಲ್ಲೇ ನೇಣು ಹಾಕಿರುವುದು.

ಪ್ರವಾದಿ ಮೊಹಮದ್ ಪೈಗಂಬರ್‌ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಸ್​ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಬೆಳಗಾವಿ: ಮುಹಮ್ಮದ್‌ ಪೈಗಂಬರ್ ಬಗ್ಗೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ ಆರೋಪ ಖಂಡಿಸಿ, ನೂಪುರ್ ಶರ್ಮಾ ಅಣಕು ಪ್ರತಿಕೃತಿ ನಡುರಸ್ತೆಯಲ್ಲೇ ನೇಣು ಹಾಕಿದ್ದ ಮೂವರನ್ನ ವಶಕ್ಕೆ ಪಡೆದು ನಗರದ ಮಾರ್ಕೆಟ್ ಪೊಲೀಸರಿಂದ ತೀವ್ರ ವಿಚಾರಣೆ ಮಾಡಲಾಗಿದೆ. ತಾಂತ್ರಿಕ ‌ಸಾಕ್ಷ್ಯ ಆಧಾರದ ಮೇಲೆ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ಮೊಹಮ್ಮದ್ ಶೋಯೆಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. IPC ಸೆಕ್ಷನ್ 1860(u/s – 153, 109), ಕರ್ನಾಟಕ ಓಪನ್ ಪ್ಲೇಸ್‌ ಡಿಸ್ಫಿಗರ್ಮೆಂಟ್ ಆಕ್ಟ್ 1951 & 1981 (U/s-3,4)ನಡಿ ಕೇಸ್ ದಾಖಲಾಗಿತ್ತು. ಎರಡು ದಿನಗಳ ಹಿಂದೆ ಬೆಳಗ್ಗೆ 7 ಗಂಟೆ ಸುಮಾರಿಗೆ ನೂಪುರ್ ಶರ್ಮಾ ಪ್ರತಿಕೃತಿ ನೇಣು ಹಾಕಿದ್ದರು. ಫೋರ್ಟ್ ರಸ್ತೆಯ ಪಿಂಪಲ್ ಕಟ್ಟಾ ಬಳಿ ನಡೆದಿದ್ದ ಘಟನೆ ನಡೆದಿತ್ತು. ನೂಪುರ್ ಶರ್ಮಾ ಭಾವಚಿತ್ರ ಇರುವ ಪ್ರತಿಕೃತಿಗೆ ಸೀರೆ ಉಡಿಸಿ ಕಿಡಿಗೇಡಿಗಳು ನೇಣು ಹಾಕಿದ್ದರು.

TV9 Kannada


Leave a Reply

Your email address will not be published.