ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಸಿಎಂ ಅಭ್ಯರ್ಥಿಯಾಗುವಿರಾ ಎಂಬ ಪ್ರಶ್ನೆಗೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ್ದಾರೆ.

ಸದ್ಯ ಉತ್ತರಪ್ರದೇಶ ಪ್ರವಾಸದಲ್ಲಿರುವ ಪ್ರಿಯಾಂಕಾ, ಜನರ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಪಕ್ಷ ಹೋರಾಡಲಿದೆ, ಸಾರ್ವಜನಿಕರ ನೋವಿನಲ್ಲಿ ಭಾಗಿಯಾಗಲಿದೆ ಎಂದು ಹೇಳಿದ್ದಾರೆ. ಭವಿಷ್ಯದಲ್ಲಿ ಚುನಾವಣೆಗೆ ಸ್ಪರ್ಧಿಸುವಿರಾ ಎಂಬ ಪ್ರಶ್ನೆಗೆ ನೋಡೋಣ ಎಂದಷ್ಟೇ ಉತ್ತರಿಸಿದ್ದಾರೆ. ಇನ್ನು ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಆಗುತ್ತಿರಾ ಎಂಬ ಪ್ರಶ್ನೆಗೆ ಈಗಲೇ ಎಲ್ಲವನ್ನೂ ಹೇಳಬೇಕೆ ಎಂದು ಮರು ಪ್ರಶ್ನಿಸಿದ್ದಾರೆ.

The post ಪ್ರಿಯಾಂಕಾ ಗಾಂಧಿ ಮುಂದಿನ ಯುಪಿ ಸಿಎಂ ಅಭ್ಯರ್ಥಿ? appeared first on News First Kannada.

Source: newsfirstlive.com

Source link