ಬಿಟ್ ಕಾಯಿನ್ ಕೇಸ್ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 5 ಪ್ರಶ್ನೆ ಕೇಳಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ನಾಲಿಗೆ ಹರಿಬಿಟ್ಟಿದ್ದಾರೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಗಂಡೋ ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಹೆಸರಿನಲ್ಲೇ ಮರಿ ಖರ್ಗೆಗೆ ಯಾವುದೇ ಸ್ವಂತಿಕೆಯೇ ಇಲ್ಲ. ಶೋಷಿತರ ಹೆಸರು ಹೇಳಿ ಮರಿ ಖರ್ಗೆ ಐಷಾರಾಮಿ ಜೀವನ ನಡೆಸುತ್ತಿದೆ. ಮರಿ ಖರ್ಗೆ ಬಾಯಲ್ಲಿ ಭ್ರಷ್ಟಾಚಾರದ ಮಾತು ಕೇಳಿ ಬರ್ತಿದೆ. ಇದು ಭೂತದ ಬಾಯಲ್ಲಿ ಭಗವತ್ ಗೀತೆ ಕೇಳಿದಂತೆ ಆಗುತ್ತಿದೆ. ರಾಜೀವ್ ಗಾಂಧಿ ಮಗಳ ಹೆಸರನ್ನ ನೀವು ಇಟ್ಟುಕೊಂಡಿದ್ದೀರಾ? ಎಂದು ಪ್ರಶ್ನಿಸುವ ಮೂಲಕ ಪ್ರಿಯಾಂಕ್ ಖರ್ಗೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್: ಸಿಎಂ ಬೊಮ್ಮಾಯಿಗೆ ಪ್ರಿಯಾಂಕ ಖರ್ಗೆ ಹಾಕಿದ್ರು 5 ಸವಾಲು