ಪ್ರೀತಿಸಲು ನಿರಾಕರಿಸಿದ್ದಕ್ಕೆ ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ! ಆರೋಪಿ ಪರಾರಿ | A man has put acid on a young woman for refusing to love in bengaluru


ಪ್ರೀತಿಸಲು ನಿರಾಕರಿಸಿದ್ದಕ್ಕೆ ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ! ಆರೋಪಿ ಪರಾರಿ

ಆ್ಯಸಿಡ್ ದಾಳಿ ನಡೆಸಿದ ಯುವತಿ

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ (Acid) ದಾಳಿ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಸುಂಕದಕಟ್ಟೆ ಮುತ್ತೂಟ್ ಫಿನ್​​ಕಾರ್ಪ್​ ಬಳಿ ಸಂಭವಿಸಿದೆ. ಪ್ರೇಮಿ ನಾಗೇಶ್ ಎಂಬಾತ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದಾನೆ. ಪ್ರೀತಿಸುವಂತೆ ಯುವತಿಯ ಹಿಂದೆ ನಾಗೇಶ್ ಬಿದ್ದಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಗಾಯಾಳು ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗೇಶ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

TV9 Kannada


Leave a Reply

Your email address will not be published.