ಹಾಸನ: ಜಿಲ್ಲೆಯ ಕಾಂಗ್ರೆಸ್​ ಪಕ್ಷದ ವತಿಯಿಂದ ಇಂದು ಫುಡ್​ ಕಿಟ್​ ವಿತರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕ್ರಮದ ಹೊರಭಾಗ ಮೋದಿ ಪರ ಮೂರು ಯುವಕರು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.

ಸಕಲೇಶಪುರ ತಾಲ್ಲೂಕಿನ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಫುಡ್​ ಕಿಟ್​ ವಿತರಣೆ ಕಾರ್ಯಕ್ರಮ ನಡೆಯುತ್ತಿದ್ದು.. ಈ ವೇಳೆ ಮೋದಿ ಪರ ಮೂವರು ಘೋಷಣೆ ಕೂಗಿದ್ದಾರೆ. ಇದರಿಂದಾಗಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇನ್ನು ಮೂವರನ್ನು ಪೊಲೀಸರು ಅಲ್ಲಿಂದ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ  ಧೃವನಾರಾಯಣ್ ಸೇರಿ ಹಲವು ಮುಖಂಡರು ಭಾಗಿಯಾಗಿದ್ದರು.

The post ಫುಡ್​ಕಿಟ್​ ವಿತರಣೆ ವೇಳೆ ಮೋದಿ ಪರ ಘೋಷಣೆ: ಕೈ-ಬಿಜೆಪಿ ಕಾರ್ಯಕರ್ತರ ನಡುವೆ ಕಿತ್ತಾಟ appeared first on News First Kannada.

Source: newsfirstlive.com

Source link