ಹಾಸನ: ಕಟ್ಟಡ ಕಾರ್ಮಿಕರಿಗೆ ಫುಡ್ ಕಿಟ್ ಹಂಚಿಕೆಯಲ್ಲಿ ಅಕ್ರಮ ಆರೋಪ‌ ಕೇಳಿ ಬಂದಿದೆ. ಹೀಗಾಗಿ ಬಿಜೆಪಿ ಶಾಸಕ ಪ್ರೀತಂಗೌಡ ವಿರುದ್ಧ ಸಂಸದ ಪ್ರಜ್ವಲ್​ ರೇವಣ್ಣ ನೇತೃತ್ವದಲ್ಲಿ ಜೆಡಿಎಸ್​ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಭಟನೆ ನಡೆಸಿದರು. ಬಿಜೆಪಿ ಶಾಸಕ ಪ್ರೀತಂಗೌಡ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನ ಹೊರಹಾಕಿದರು. ಅಲ್ಲದೇ ಅಕ್ರಮದ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳನ್ನ ಒತ್ತಾಯಿಸಿದರು.

ಕಟ್ಟಡ ಕಾರ್ಮಿಕರಿಗೆ ಫುಡ್​ ಕಿಟ್​ ನೀಡ್ತೀವಿ ಎಂದು ಬಿಜೆಪಿ ಕಾರ್ಯಕರ್ತರ ಮನೆಗೆ ಕಿಟ್​ಗಳನ್ನ ನೀಡಿದ್ದಾರೆ. ಈ ಬಗ್ಗೆ ಸರಿಯಾಗಿ, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಪ್ರಜ್ವಲ್​ ರೇವಣ್ಣ, ಜಿಲ್ಲಾಧಿಕಾರಿ ಆರ್​.ಗಿರೀಶ್​ಗೆ ಮನವಿ ಸಲ್ಲಿಸಿದ್ದಾರೆ.

The post ಫುಡ್​ ಕಿಟ್​​ ಹಂಚಿಕೆಯಲ್ಲಿ ಅಕ್ರಮ ಆರೋಪ; ಪ್ರೀತಂಗೌಡ ವಿರುದ್ಧ ಪ್ರಜ್ವಲ್ ರೇವಣ್ಣ ಧಿಕ್ಕಾರ  appeared first on News First Kannada.

Source: newsfirstlive.com

Source link