ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ವಿಡಿಯೊ ಕಾಲ್ ಮಾಡಿದ್ದ ಯುವತಿಗಾಗಿ ತೀವ್ರಗೊಂಡ ಹುಡುಕಾಟ – Bande Mutt Swamiji Suicide Case Police Searching Girl who made mobile call


ಸ್ವಾಮೀಜಿ ‌ಆತ್ಮಹತ್ಯೆಗೆ ಸಂಬಂಧಿಸಿದ ಹಲವು ಬೆಳವಣಿಗೆಗಳ ಬಗ್ಗೆ ವೀರಶೈವ ಲಿಂಗಾಯದ ಸಮುದಾಯದ ಪ್ರಮುಖರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿವರಣೆ ನೀಡಲಿದ್ದಾರೆ.

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ವಿಡಿಯೊ ಕಾಲ್ ಮಾಡಿದ್ದ ಯುವತಿಗಾಗಿ ತೀವ್ರಗೊಂಡ ಹುಡುಕಾಟ

ಬಂಡೆಮಠದ ಬಸವಲಿಂಗ ಸ್ವಾಮೀಜಿ

ಬೆಂಗಳೂರು: ನೆಲಮಂಗಲ ತಾಲ್ಲೂಕು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಕುದೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ವಾಮೀಜಿಗೆ ಹೆಚ್ಚು ಆಪ್ತರಾಗಿದ್ದವರು ಎಂದು ಹೇಳಲಾಗಿದೆ. ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ವಿಡಿಯೊ ಕಾಲ್ ಮಾಡಿದ ಯುವತಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಸ್ವಾಮೀಜಿ ಸಾವಿನ ಪ್ರಕರಣವು ಮುಖ್ಯಮಂತ್ರಿ ಕಚೇರಿ ತಲುಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು (ಅ 27) ವೀರಶೈವ ‌ಸಮಾಜದ ಮುಖಂಡ ಪರಶಿವಯ್ಯ ನೇತೃತ್ವದ ತಂಡವೊಂದು ‌ಭೇಟಿ ಮಾಡಲು ಸಿದ್ಧತೆ ನಡೆಸಿದೆ. ಸ್ವಾಮೀಜಿ ‌ಆತ್ಮಹತ್ಯೆಗೆ ಸಂಬಂಧಿಸಿದ ಹಲವು ಬೆಳವಣಿಗೆಗಳ ಬಗ್ಗೆ ಈ ತಂಡವು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ವಿವರಿಸಲಿದ್ದಾರೆ.

ಸಿಡಿಗೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಶಂಕೆ

ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀ ‌ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಸ್ವಾಮೀಜಿ ಬರೆದಿಟ್ಟಿರುವ ಡೆತ್ ನೋಟ್ ಸಂಪೂರ್ಣ ಮಾಹಿತಿ ಟಿವಿ9 ಗೆ ದೊರೆತಿದೆ. ಡೆತ್​ನೋಟ್​ನ ಐದು ಪುಟಗಳು ನಾಪತ್ತೆಯಾಗಿವೆ. ಪ್ರಕರಣ ಸಂಬಂಧ ರಾಮನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ‘ಟಿವಿ9’ಗೆ ಹೇಳಿಕೆ ನೀಡಿದ್ದು, ಆತ್ಮಹತ್ಯೆ ಸ್ಥಳದಲ್ಲಿ 3 ಪುಟಗಳ ಡೆತ್​ನೋಟ್​​ ಪತ್ತೆಯಾಗಿದೆ. ಡೆತ್​ನೋಟ್​ನಲ್ಲಿ ಕೆಲವು ವ್ಯಕ್ತಿಗಳ ಹೆಸರು ಉಲ್ಲೇಖ ಆಗಿದೆ. ತನಿಖೆಯ ದೃಷ್ಟಿಯಿಂದ ಅವರ ಹೆಸರನ್ನು ಬಹಿರಂಗಪಡಿಸಲ್ಲ. ಶ್ರೀಗಳು ಬಳಸುತ್ತಿದ್ದ 2 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದಿರುವ ಎರಡೂ ಮೊಬೈಲ್​ಗಳು ಕೂಡ ಲಾಕ್ ಆಗಿವೆ. ನಮಗೆ ಸಿಕ್ಕ ಡೆತ್​ನೋಟ್, ವೈರಲ್​ ಆದ ಫೋಟೋಗೂ ವ್ಯತ್ಯಾಸವಿದೆ. ಡೆತ್​ನೋಟ್​ ಸಿಕ್ಕಿ ನಮ್ಮ ಗಮನಕ್ಕೆ ತರದಿದ್ರೆ ಕೇಸ್​ ಹಾಕ್ತೇವೆ. ಡೆತ್​ನೋಟ್​, ಮೊಬೈಲ್ ಫೋನ್​ FSLಗೆ ಕಳುಹಿಸಲಾಗುವುದು. ಮಠದ ಮೇಲೆ ಯಾರೂ ಸಂಶಯ ವ್ಯಕ್ತಪಡಿಸುತ್ತಿಲ್ಲ’ ಎಂದು ಹೇಳಿದ್ದಾರೆ.

ಶ್ರೀಗಳಿಗೆ ಇದ್ದ ಬೆದರಿಕೆ ಕರೆಗಳ ಬಗ್ಗೆ ಜನರು ಮಾತಾಡ್ತಿದ್ದಾರೆ. ಎಲ್ಲಾ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಸ್ವಾಮೀಜಿ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ರಾಮನಗರದಲ್ಲಿ ಎಸ್​ಪಿ ಸಂತೋಷ್ ಬಾಬು ಹೇಳಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.