ಬಂದಿರುವ ಆರೋಪಕ್ಕೂ ಜಿಲ್ಲಾಧಿಕಾರಿಗೂ ಯಾವುದೇ ಸಂಬಂಧವಿಲ್ಲ: ಬೆಂಗಳೂರು ನಗರ ಡಿಸಿ ಮಂಜುನಾಥ್ ಹೇಳಿಕೆ | The District Collector has nothing to do with the accusation said by DC Manjunath


ಬಂದಿರುವ ಆರೋಪಕ್ಕೂ ಜಿಲ್ಲಾಧಿಕಾರಿಗೂ ಯಾವುದೇ ಸಂಬಂಧವಿಲ್ಲ: ಬೆಂಗಳೂರು ನಗರ ಡಿಸಿ ಮಂಜುನಾಥ್ ಹೇಳಿಕೆ

ಜಿಲ್ಲಾಧಿಕಾರಿಗಳ ಕಚೇರಿ

ಭ್ರಷ್ಟಾಚಾರ ಸಂಬಂಧ ಬಂದಿರುವ ಆರೋಪಕ್ಕೂ ಜಿಲ್ಲಾಧಿಕಾರಿಗೂ ಯಾವುದೇ ಸಂಬಂಧವಿಲ್ಲ. ಇದು ಸುಳ್ಳು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಭ್ರಷ್ಟಾಚಾರ ಸಂಬಂಧ ಬಂದಿರುವ ಆರೋಪಕ್ಕೂ ಜಿಲ್ಲಾಧಿಕಾರಿಗೂ ಯಾವುದೇ ಸಂಬಂಧವಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ (Manjunath) ಸ್ಪಷ್ಟನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB)ದ ಅಧಿಕಾರಿಗಳು ದಾಳಿ ಸಂಬಂಧ ಈ ಹೇಳಿಕೆ ನೀಡಿದ್ದಾರೆ. ಇದೆಲ್ಲಾ ಸಂಪೂರ್ಣ ಸುಳ್ಳು. ನಮ್ಮ‌ ಕಾರ್ಯವೈಖರಿ ಕಂಡರೆ ಕೆಲವರಿಗೆ ಆಗುವುದಿಲ್ಲ. ಹತ್ತು ಹಲವಾರು ಜಮೀನು ವಶಪಡಿಸಿಕೊಂಡಿದ್ದೇವೆ. ಆ ಹಿನ್ನೆಲೆಯಲ್ಲಿ ಹೆಸರು ಕೆಡಿಸಲು ಕೆಲವರಿಂದ ಯತ್ನ ನಡೆಯುತ್ತಿದೆ. ಇದರ ಹಿಂದಿನ ಮುಖವಾಡ ಕಳಚಿಬೀಳಲಿದೆ ಎಂದು ಹೇಳಿದರು.

TV9 Kannada


Leave a Reply

Your email address will not be published. Required fields are marked *