ಬಂದೂಕು ಸಂಸ್ಕೃತಿಗೆ ಕಡಿವಾಣ ಹಾಕಿದ ಪಂಜಾಬ್ ಸರ್ಕಾರ, ಹಿಂಸೆಯನ್ನು ವೈಭವೀಕರಿಸುವ ಹಾಡುಗಳು ಬ್ಯಾನ್ – Punjab govt orders crackdown on gun culture, bans public display of firearms, songs glorifying weapons


ಪಂಜಾಬ್ ಸರ್ಕಾರ ರಾಜ್ಯದ ಕುಖ್ಯಾತ ಬಂದೂಕು ಸಂಸ್ಕೃತಿಗೆ ಕಡಿವಾಣ ಹಾಕಿದ್ದು, ಹಿಂಸೆಯನ್ನು ವೈಭವೀಕರಿಸುವ ಹಾಡುಗಳು ಬ್ಯಾನ್ ಮಾಡಿದೆ.

ಚಂಡೀಗಢ: ಪಂಜಾಬ್‌(Punjab) ನಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಭಗವಂತ್ ಮಾನ್(Bhagwant Mann) ನೇತೃತ್ವದ ಆಪ್ ಸರ್ಕಾರ, ಶಸ್ತ್ರಾಸ್ತ್ರ (weapons)ನಿಯಂತ್ರಣವನ್ನು ಬಿಗಿಗೊಳಿಸಿದೆ. ಸಾರ್ವಜನಿಕವಾಗಿ ಅಂದ್ರೆ, ಮದುವೆ, ಜಾತ್ರೆಗಳಲ್ಲಿ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ಪಂಜಾಬ್ ಸರ್ಕಾರ ನಿಷೇಧಿಸಿದ್ದು, ಶಸ್ತ್ರಾಸ್ತ್ರಗಳು ಅಥವಾ ಹಿಂಸೆಯನ್ನು ವೈಭವೀಕರಿಸುವ ಹಾಡುಗಳನ್ನು ಕೂಡಾ ಕಟ್ಟುನಿಟ್ಟಾಗಿ ನಿಷೇಧಿಸಿ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು(ನ.13) ಆದೇಶಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಆಪ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿದೆ.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ , ಬಂದೂಕು ಸಂಸ್ಕೃತಿಗೆ ಕಡಿವಾಣ ಹಾಕಿದ್ದಾರೆ.

ಮಾನವನ ಜೀವನಕ್ಕೆ, ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಶಸ್ತ್ರಾಸ್ತ್ರಗಳನ್ನು ಅಜಾಗರೂಕರಾಗಿ ಬಳಕೆ ಮಾಡುವುದು ಅಥವಾ ಸಂಭ್ರಮಾಚರಣೆಯ ವೇಳೆ ಗುಂಡು ಹಾರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಅಧಿಕಾರಿಗಳು ಖಡಕ್ ಸೂಚನೆ ಕೊಟ್ಟಿದ್ದಾರೆ.

ಇನ್ನು ಇದುವರೆಗೆ ನೀಡಿರುವ ಶಸ್ತ್ರಾಸ್ತ್ರ ಪರವಾನಗಿಗಳನ್ನು ಮುಂದಿನ ಮೂರು ತಿಂಗಳೊಳಗೆ ಪರಿಶೀಲಿಸಲು ಸೂಚಿಸಿದ್ದಾರೆ. ಅಲ್ಲದೇ ಹೊಸ ಗನ್ ಲೈಸೆನ್ಸ್ ಗಾಗಿ ಸೂಕ್ತ ಕಾರಣಗಳನ್ನು ನೀಡದಿದ್ದರೆ ಅಂತವರಿಗೆ ಪರವಾನಗಿಯನ್ನು ನೀಡಲಾಗುವುದಿಲ್ಲ. ಯಾವುದೇ ಸೂಕ್ತ ಕಾರಣಗಳು ಇಲ್ಲದೇ ಸುಖಸುಮ್ಮನೆ ವ್ಯಕ್ತಿಗೆ ಶಸ್ತ್ರಾಸ್ತ್ರ ಪರವಾನಗಿ ನೀಡಿರುವುದು ಕಂಡುಬಂದಲ್ಲಿ ಅದನ್ನು ತಕ್ಷಣವೇ ರದ್ದುಗೊಳಿಸಬೇಕು ಅಂತಲೂ ಸಹ ಸಿಎಂ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *