ಬೆಂಗಳೂರು: ‘ಬಡತನದ ಕಾರಣಕ್ಕೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು’ ಎಂದು ಹೈಕೋರ್ಟ್​ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯದ ಅನೇಕ ಮಕ್ಕಳಿಗೆ ಅನ್​ಲೈನ್​ ಕ್ಲಾಸ್ ಸಿಗುತ್ತಿಲ್ಲ ಎಂಬುದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ನಡೆತು. ಬಡಮಕ್ಕಳಿಗೆ ಆನ್​ಲೈನ್​ ಕ್ಲಾಸ್​, ಉಚಿತ ನೆಟ್, ಟ್ಯಾಬ್ & ಲ್ಯಾಪ್ ಟಾಪ್ ಕೋರಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್ ಬಡತನದ ಕಾರಣಕ್ಕೆ ಮಕ್ಕಳು ಆನ್​ಲೈನ್​ ಶಿಕ್ಷಣದಿಂದ ವಂಚಿತರಾಗಬಾರದು ಎಂದಿದೆ.

ಶಿಕ್ಷಣ ಮುಂದುವರಿಕೆ ನಿಲ್ಲಿಸಲು ಬಡತನ ಕಾರಣವಾಗಬಾರದು. ಶಾಲೆಗಳನ್ನು ಪುನಾರಂಭಿಸುವ ನಿರ್ಧಾರವನ್ನು ಮಾತ್ರ ಲೆಕ್ಕಿಸದೆ, ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವ ತುರ್ತು ಅವಶ್ಯಕತೆಯಿದೆ ಅಂತಾ ಸೂಚಿಸಿದೆ. ಅಷ್ಟೇ ಅಲ್ಲ ರಾಜ್ಯದ ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಬಗ್ಗೆ ದಾಖಲೆ ಸಲ್ಲಿಸುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಇನ್ನು ಅರ್ಜಿ ಮುಂದಿನ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿ ಆದೇಶಿಸಿದೆ.

The post ಬಡತನ ಕಾರಣಕ್ಕೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು -ಹೈಕೋರ್ಟ್ ಗರಂ appeared first on News First Kannada.

Source: newsfirstlive.com

Source link