ಬೆಂಗಳೂರು: ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ಚಂದ್ರು ಅವರು ಹುಲಿ ಹಾಲಿನ ಮೇವು..ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ರು. ಕರ್ನಾಟಕ ಫಿಲಂ ಛೇಂಬರ್ ಹಾಗೂ SIFCCRIPನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಇಂದು ಬೆಳಗ್ಗೆ 9 ಗಂಟೆಯಿಂದ ಶಿವಾನಂದ ಸರ್ಕಲ್ ಬಳಿ ಇರೋ ನಿವಾಸದಲ್ಲಿ ಚಂದ್ರು ಅವರ ಅಂತಿಮ‌ದರ್ಶನಕ್ಕೆ ವ್ಯವಸ್ಥೆ ಮಾಡಲಾಗ್ತಿದೆ.

The post ಬಬ್ರುವಾಹನ ಸಿನಿಮಾ ಖ್ಯಾತಿಯ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಇನ್ನಿಲ್ಲ appeared first on News First Kannada.

Source: newsfirstlive.com

Source link