NZ vs SCO: ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಚಾಪ್ಮನ್ 7 ಸಿಕ್ಸ್ನೊಂದಿಗೆ 44 ಎಸೆತಗಳಲ್ಲಿ 83 ರನ್ ಬಾರಿಸಿದ್ದರು. ಇನ್ನೊಂದೆಡೆ ಬ್ರೇಸ್ವೆಲ್ ಅಂತಿಮ ಓವರ್ಗಳ ವೇಳೆ 25 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್ನೊಂದಿಗೆ 61 ರನ್ ಸಿಡಿಸಿದರು.
ಶುಕ್ರವಾರ ಎಡಿನ್ಬರ್ಗ್ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ಸ್ಕಾಟ್ಲೆಂಡ್ (NZ vs SCO) ವಿರುದ್ಧ 102 ರನ್ಗಳ ಭರ್ಜರಿ ಜಯ ಸಾಧಿಸಿದೆ. ಮಿಚೆಲ್ ಸ್ಯಾಂಟ್ನರ್ ನಾಯಕತ್ವದಲ್ಲಿ ಕಣಕ್ಕಿಳಿದ ಕಿವೀಸ್ ತಂಡವು ಭರ್ಜರಿ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ತಂಡದ ಸ್ಟಾರ್ ಬ್ಯಾಟ್ಸ್ಮನ್ ಫಿನ್ ಅಲೆನ್ ಕೇವಲ 6 ರನ್ಗಳಿಸಿ ಔಟಾಗಿದ್ದರು. ಇದಾದ ಬಳಿಕ ವಿಕೆಟ್ ಕೀಪರ್ ಕ್ಲೀವರ್ ಕೂಡ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ನಂತರ ಬಂದ ಡೆರಿಲ್ ಮಿಚೆಲ್ ಮತ್ತು ಮಾರ್ಕ್ ಚಾಪ್ಮನ್ ಮೂರನೇ ವಿಕೆಟ್ಗೆ 62 ರನ್ ಸೇರಿಸಿದರು.
ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಚಾಪ್ಮನ್ 7 ಸಿಕ್ಸ್ನೊಂದಿಗೆ 44 ಎಸೆತಗಳಲ್ಲಿ 83 ರನ್ ಬಾರಿಸಿದ್ದರು. ಇನ್ನೊಂದೆಡೆ ಬ್ರೇಸ್ವೆಲ್ ಅಂತಿಮ ಓವರ್ಗಳ ವೇಳೆ 25 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್ನೊಂದಿಗೆ 61 ರನ್ ಸಿಡಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿತು.
ಈ ಕಠಿಣ ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ಕ್ರೀಸ್ ಕಚ್ಚಿ ನಿಲ್ಲಲಾಗಲಿಲ್ಲ. 29 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ಗಳ ನೆರವಿನಿಂದ 37 ರನ್ ಗಳಿಸಿ ಕ್ರಿಸ್ ಗ್ರೀವ್ಸ್ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಅಂತಿಮವಾಗಿ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ಗಳಿಸಿ ಸೋಲೊಪ್ಪಿಕೊಂಡಿತು. ಅತ್ತ ನ್ಯೂಜಿಲೆಂಡ್ ತಂಡವು 102 ರನ್ಗಳ ಭರ್ಜರಿ ಜಯ ಸಾಧಿಸಿತು.
ವಿಶೇಷ ಎಂದರೆ 254 ರನ್ ಕಲೆಹಾಕುವ ಮೂಲಕ ನ್ಯೂಜಿಲೆಂಡ್ ಟಿ20 ಕ್ರಿಕೆಟ್ನಲ್ಲಿ ಹೊಸ ದಾಖಲೆಯನ್ನು ಸಹ ಬರೆದಿದೆ. ಅಂದರೆ ಟಿ20 ಕ್ರಿಕೆಟ್ನಲ್ಲಿ ಇದು ನ್ಯೂಜಿಲೆಂಡ್ ತಂಡದ ಗರಿಷ್ಠ ಸ್ಕೋರ್. ಅಷ್ಟೇ ಅಲ್ಲದೆ ವಿಶ್ವದ 5ನೇ ಅತ್ಯುತ್ತಮ ಇನಿಂಗ್ಸ್ ಆಗಿದೆ. ಅಂದರೆ ಟಿ20 ಕ್ರಿಕೆಟ್ನಲ್ಲಿ 5 ತಂಡಗಳು ಮಾತ್ರ 250 ಕ್ಕೂ ಅಧಿಕ ರನ್ ಕಲೆಹಾಕಿದೆ. ಈ ಟಾಪ್ 5 ತಂಡಗಳ ಪಟ್ಟಿಗೆ ಇದೀಗ ನ್ಯೂಜಿಲೆಂಡ್ ಕೂಡ ಸೇರಿಕೊಂಡಿದೆ.
ಸದ್ಯ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಅಫ್ಘಾನಿಸ್ತಾನ್ ತಂಡದ ಹೆಸರಿನಲ್ಲಿದೆ. ಅಫ್ಘಾನಿಸ್ತಾನ್ 2019 ರಲ್ಲಿ ಐರ್ಲೆಂಡ್ ವಿರುದ್ದ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 278 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇನ್ನು ಟೀಮ್ ಇಂಡಿಯಾ ಟಿ20 ಕ್ರಿಕೆಟ್ನಲ್ಲಿ ಕಲೆಹಾಕಿದ ಗರಿಷ್ಠ ಸ್ಕೋರ್ 260 ರನ್ಗಳು. 2017 ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ದ ಈ ಸಾಧನೆ ಮಾಡಿತ್ತು. ಇದೀಗ ನ್ಯೂಜಿಲೆಂಡ್ ತಂಡ ಕೂಡ 254 ರನ್ ಬಾರಿಸುವ ಮೂಲಕ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದೆ.