ಬಳ್ಳಾರಿ ವಿಮ್ಸ್​ನಲ್ಲಿ ಎಂಬಿಬಿಎಸ್ ಸೀಟುಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | National Medical Commission approves increase MBBS seats in Bellary VIMs


ಬಳ್ಳಾರಿ ಜಿಲ್ಲೆಯ ವಿಮ್ಸ್​ನಲ್ಲಿ ಎಂಬಿಬಿಎಸ್​ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗವು ಸೀಟುಗಳನ್ನು ಹೆಚ್ಚಿಸಲು ಅನುಮತಿ ನೀಡಿದೆ.

ಬಳ್ಳಾರಿ ವಿಮ್ಸ್​ನಲ್ಲಿ ಎಂಬಿಬಿಎಸ್ ಸೀಟುಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

ಬಳ್ಳಾರಿ ವಿಮ್ಸ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬಳ್ಳಾರಿ: ಜಿಲ್ಲೆಯ ವಿಮ್ಸ್​ನಲ್ಲಿ ಎಂಬಿಬಿಎಸ್​ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ಸೂಚಿಸಿದೆ. ಅದರಂತೆ ಇದೇ ಶೈಕ್ಷಣಿಕ ಸಾಲಿನಿಂದ ಬಳ್ಳಾರಿ ವಿಮ್ಸ್​ನಲ್ಲಿ 50 ಹೆಚ್ಚುವರಿ ಎಂಬಿಬಿಎಸ್​ ಸೀಟುಗಳು ಲಭ್ಯವಾಗಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

“ಬಳ್ಳಾರಿಯ ವಿಮ್ಸ್​​ನಲ್ಲಿ ಎಂಬಿಬಿಎಸ್​ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಇದೇ ಶೈಕ್ಷಣಿಕ ಸಾಲಿನಿಂದ 50 ಹೆಚ್ಚುವರಿ ಸೀಟುಗಳು ಲಭ್ಯವಾಗಲಿದೆ. ಕಳೆದ 3 ವರ್ಷಗಳಲ್ಲಿ ಕರ್ನಾಟಕ ಬಿಜೆಪಿ ಸರ್ಕಾರವು 4 ಹೊಸ ಮೆಡಿಕಲ್ ಕಾಲೇಜು ಹಾಗೂ 750 ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸಿದೆ” ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.