ಬಳ್ಳಾರಿ: ಸರ್ಕಾರಿ ಬಸ್​ ಮತ್ತು ಲಾರಿ ನಡುವೆ ಭೀಕರ ಅಪಘಾತ: ಬಸ್​ನಲ್ಲಿದ್ದ 11 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ | Ballary: Accident between Government bus and a lorry: 11 Peoples Injured, One’s condition is serious


ಬಳ್ಳಾರಿ: ಸರ್ಕಾರಿ ಬಸ್​ ಮತ್ತು ಲಾರಿ ನಡುವೆ ಭೀಕರ ಅಪಘಾತ: ಬಸ್​ನಲ್ಲಿದ್ದ 11 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಸರ್ಕಾರಿ ಬಸ್-ಲಾರಿ ನಡುವೆ ಡಿಕ್ಕಿ.

ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಲಾರಿಗಳು ಡಿಕ್ಕಿಯಾಗಿದ್ದು, ಓರ್ವ ಚಾಲಕನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ.

ಬಳ್ಳಾರಿ: ಸರ್ಕಾರಿ ಬಸ್​ ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, (Accident) 11 ಜನರಿಗೆ ಗಾಯಗೊಂಡಿರುವಂತಹ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಹೊಸಪೇಟೆಗೆ ಬರುತ್ತಿದ್ದ KSRTC ಬಸ್, ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಸಾರಿಗೆ ಬಸ್‌ನ ಮುಂಭಾಗ‌‌‌ ಸಂಪೂರ್ಣ ಜಖಂಗೊಂಡಿದೆ. ಬಸ್​ನಲ್ಲಿದ್ದ 11 ಜನರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ನಾಲ್ವರು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ‌ದಾಖಲು ಮಾಡಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

TV9 Kannada


Leave a Reply

Your email address will not be published.