ಬೀದರ್: ಇಂದು ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಬೀದರ್ ನಗರದ ಬಿವಿಬಿ ಕಾಲೇಜ್ನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.

28 ಸುತ್ತುಗಳಲ್ಲಿ ವೋಟ್​ ಕೌಂಟಿಂಗ್ ನಡೆಯಲಿದೆ. ಮತ ಎಣಿಕೆ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಈಗಾಗಲೇ ಮತ ಎಣಿಕೆ ಕೇಂದ್ರದಕ್ಕೆ ಆಗಮಿಸಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.

The post ಬಸವಕಲ್ಯಾಣದಲ್ಲಿ ಮತಎಣಿಕೆಗೆ ಸಿದ್ಧತೆ; ಅಭ್ಯರ್ಥಿಗಳ ಎದೆಯಲ್ಲಿ ಢವಢವ appeared first on News First Kannada.

Source: newsfirstlive.com

Source link