ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಸ್ಪಷ್ಟ ಬಹುಮತದ ಮುನ್ನಡೆ ಸಾಧಿಸಿದ್ದು, ಬಿಜೆಪಿ ಗೆಲುವು ಖಚಿತವಾಗುತ್ತಿದಂತೆ ಸಿಎಂ ಬಿಎಸ್​ ಯಡಿಯೂರಪ್ಪ ಅವರು ಧನ್ಯವಾ ಅರ್ಪಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿ ಬರೆದುಕೊಂಡಿದ್ದಾರೆ.

ಇನ್ನು ಬಸವಕಲ್ಯಾಣ ಕ್ಷೇತ್ರದ 28 ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ -50,107 ಮತ, ಬಿಜೆಪಿ – 70,556 ಮತ, ಜೆಡಿಎಸ್ – 11,390 ಮತ ಹಾಗೂ ಬಂಡಾಯ ಅಭ್ಯರ್ಥಿ 9,390 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ 20,449 ಮತಗಳ ಅಂತರದಿಂದ ಜಯಭೇರಿ ಪಡೆದಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

The post ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ- ಜನತೆಗೆ ಸಿಎಂ ಬಿಎಸ್​​ವೈ ಧನ್ಯವಾದ appeared first on News First Kannada.

Source: newsfirstlive.com

Source link