– ಕೃಷ್ಣಾ ನದಿ ತೀರದಲ್ಲಿ ಅಲರ್ಟ್

ಯಾದಗಿರಿ: ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ತೀರದಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಲಾಶಯದ ಒಟ್ಟು 25 ಗೇಟ್ ಗಳ ಪೈಕಿ 8 ಗೇಟ್ ಓಪನ್ ಮಾಡಿ, ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಸಮೀಪದಲ್ಲಿರುವ ಬಸವಸಾಗರ ಜಲಾಶಯ ಇದಾಗಿದೆ.

33.33 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯ ಹೊಂದಿರುವ ಡ್ಯಾಂ ನಲ್ಲಿ ಸದ್ಯ, 20.79 ಟಿಎಂಸಿ ನೀರು ಸಂಗ್ರಹವಾಗಿದ್ದು, 43 ಸಾವಿರ ಕ್ಯೂಸೆಕ್ ಒಳಹರಿವು ಇದ್ದ್ರೆ, 45 ಸಾವಿರ ಕ್ಯೂಸೆಕ್ ಹೊರಹರಿವಿದೆ.

The post ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ appeared first on Public TV.

Source: publictv.in

Source link