ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದ ನಂತರ ತನ್ನ ಗ್ರಾಮಕ್ಕೆ ಸ್ಥಗಿತಗೊಂಡಿರುವ ಬಸ್ ಸೇವೆಯನ್ನು ಮರುಸ್ಥಾಪಿಸಲು ಸಹಾಯ ಕೋರಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣಗೆ ತೆಲಂಗಾಣದ 8ನೇ ತರಗತಿ ವಿದ್ಯಾರ್ಥಿನಿ ಪತ್ರ ಬರೆದಿದ್ದಾಳೆ.
ಮುಖ್ಯನ್ಯಾಯಮೂರ್ತಿಗಳು ಈ ಪತ್ರವನ್ನು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕಳುಹಿಸಿದ್ದು, ಗ್ರಾಮಕ್ಕೆ ಬಸ್ ಸೇವೆಯನ್ನು ಪುನಃ ಆರಂಭಿಸಲಾಗಿದೆ ಅಂತ TSRTC ತಿಳಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಂತರ ಸ್ಥಗಿತಗೊಂಡಿದ್ದ ಬಸ್ ಸೇವೆ ಮತ್ತೆ ಆರಂಭಿಸದ ಕಾರಣ ಶಾಲೆ ಮತ್ತು ಕಾಲೇಜಿಗೆ ಹೋಗಲು ತೊಂದರೆಯಾಗಿತ್ತು.
ಇದ್ರಿಂದ ನೊಂದ ವೈಷ್ಣವಿ ಬಸ್ ವ್ಯವಸ್ಥೆಯಿಲ್ಲದ ಹಿನ್ನೆಲೆ, ತನಗೆ ಹಾಗೂ ತನ್ನಂಥ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಕೋರಿ ಆಕೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣಗೆ ಪತ್ರ ಬರೆದಿದ್ದಳು.