ಬಹುಶಃ ಆತ ಬಿಜೆಪಿಗೆ ಸಹಾಯ ಮಾಡಲು ಬಯಸಿರಬಹುದು; ಪ್ರಶಾಂತ್ ಕಿಶೋರ್ ವಿರುದ್ಧ ಸಿಎಂ ನಿತೀಶ್ ಕುಮಾರ್ ವಾಗ್ದಾಳಿ | May be he wants to help BJP CM Nitish Kumar sharp swipe at Prashant Kishor


ಸಿಎಂ ನಿತೀಶ್ ಕುಮಾರ್ ಈ ವಾರ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಪ್ರತಿಪಕ್ಷಗಳ ನಾಯಕರ ಜೊತೆ ಸಭೆ ನಡೆಸಿದ್ದರು.

ಬಹುಶಃ ಆತ ಬಿಜೆಪಿಗೆ ಸಹಾಯ ಮಾಡಲು ಬಯಸಿರಬಹುದು; ಪ್ರಶಾಂತ್ ಕಿಶೋರ್ ವಿರುದ್ಧ ಸಿಎಂ ನಿತೀಶ್ ಕುಮಾರ್ ವಾಗ್ದಾಳಿ

ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಈ ವಾರ ದೆಹಲಿಗೆ ಭೇಟಿ ನೀಡುವ ಮೂಲಕ ಪ್ರತಿಪಕ್ಷಗಳ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಬುಧವಾರ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್, ಪ್ರಶಾಂತ್ ಕಿಶೋರ್ (Prashant Kishor) ಬಹುಶಃ ಬಿಜೆಪಿಗೆ ಸಹಾಯ ಮಾಡಲು ಬಯಸಿರಬಹುದು ಎಂದು ಟೀಕಿಸಿದ್ದಾರೆ.

ಸಿಎಂ ನಿತೀಶ್ ಕುಮಾರ್ ಈ ವಾರ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಪ್ರತಿಪಕ್ಷಗಳ ನಾಯಕರ ಜೊತೆ ಸಭೆ ನಡೆಸಿದ್ದರು. 2024ರ ರಾಷ್ಟ್ರೀಯ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಗ್ಗಟ್ಟಿನ ಬಲವನ್ನು ಪ್ರದರ್ಶಿಸಲು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ 71 ವರ್ಷದ ಜೆಡಿಯು ನಾಯಕ ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡಿದ್ದರು.

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ ಆರ್​ಜೆಡಿ ಮತ್ತಿತರ ವಿಪಕ್ಷಗಳ ಜೊತೆ ಮಹಾಮೈತ್ರಿ ಮಾಡಿಕೊಂಡು ಹೊಸ ಸರ್ಕಾರ ರಚಿಸಿದ್ದರು. ವೈದ್ಯಕೀಯ ತಪಾಸಣೆಗೆ ವಿದೇಶಕ್ಕೆ ತೆರಳಲಿರುವ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ವಿದೇಶದಿಂದ ಹಿಂದಿರುಗಿದ ನಂತರ ಅವರನ್ನೂ ಭೇಟಿಯಾಗುವುದಾಗಿ ನಿತೀಶ್ ಕುಮಾರ್ ಹೇಳಿದ್ದರು.

TV9 Kannada


Leave a Reply

Your email address will not be published.