ಸೂಪರ್ ಸ್ಟಾರ್ ರಜಿನಿಕಾಂತ್ ‘ಅಣ್ಣಾತೆ’ ಸಿನಿಮಾ
ರಜನಿಕಾಂತ್ ನಟನೆಯ ‘ಅಣ್ಣಾಥೆ’ ದೀಪಾವಳಿ ನಿಮಿತ್ತ ನವೆಂಬರ್ 4ರಂದು ರಿಲೀಸ್ ಆಗಿತ್ತು. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡುತ್ತಿದೆ. ಮೊದಲ ದಿನವೇ ಅದ್ಭುತ ಗಳಿಕೆ ಮಾಡಿದ್ದ ಈ ಚಿತ್ರದ ಗಳಿಕೆ ಐದು ದಿನಗಳಲ್ಲಿ 150 ಕೋಟಿ ರೂಪಾಯಿ ದಾಟಿದೆ. ಇದನ್ನು ಕೇಳಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ. ಶೀಘ್ರದಲ್ಲೇ ಸಿನಿಮಾ 200 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿದೆ. ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದಾಗ್ಯೂ ಜನರು ಸಿನಿಮಾ ನೋಡೋಕೆ ತೆರಳುತ್ತಿದ್ದಾರೆ. ‘ಅಣ್ಣಾಥೆ’ ಅಭಿಮಾನಿಗಳ ಪಾಲಿಗೆ ಪರ್ಫೆಕ್ಟ್ ದೀಪಾವಳಿ ಉಡುಗೊರೆ ಆಗಿದೆ.
‘ಅಣ್ಣಾಥೆ’ ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ. ಕರ್ನಾಟಕ ಹಾಗೂ ಆಂಧ್ರ ಸೇರಿ ಮತ್ತಿತರ ರಾಜ್ಯಗಳಲ್ಲೂ ಈ ಸಿನಿಮಾ ದೊಡ್ಡ ಮಟ್ಟದಲ್ಲೇ ರಿಲೀಸ್ ಆಗಿದೆ. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ನವೆಂಬರ್ 5ರಂದು ಸಿನಿಮಾ 42.6 ಕೋಟಿ ರೂಪಾಯಿ, ನವೆಂಬರ್ 6ರಂದು ಚಿತ್ರ 33.71 ಕೋಟಿ ಗಳಿಸಿದೆ. ಭಾನುವಾರ ಸಿನಿಮಾ ಗಳಿಕೆ 28.20 ಕೋಟಿ ಹಾಗೂ ಸೋಮವಾರ 11.85 ಕೋಟಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಕಲೆಕ್ಷನ್ 186.58 ಕೋಟಿ ರೂಪಾಯಿ ಆಗಿದೆ.
#Annaatthe WW Box Office
Day 1 – ₹ 70.19 cr
Day 2 – ₹ 42.63 cr
Day 3 – ₹ 33.71 cr
Day 4 – ₹ 28.20 cr
Day 5 – ₹ 11.85 cr
Total – ₹ 186.58 cr#Rajinikanth #KeerthySuresh #Nayanthara— Manobala Vijayabalan (@ManobalaV) November 9, 2021
ಬಾಕ್ಸ್ ಆಫೀಸ್ ತಜ್ಞ ಮನೋಬಲ ವಿಜಯ ಬಾಲನ್ ಐದನೇ ದಿನದ ಕಲೆಕ್ಷನ್ ಕುರಿತು ಮಾಹಿತಿ ನೀಡಿದ್ದಾರೆ. ‘ಮುಂಜಾನೆಯಿಂದಲೇ ಚೆನ್ನೈನಲ್ಲಿ ಮಳೆ ಆಗುತ್ತಿದೆ. ಆದಾಗ್ಯೂ ರಜನಿಕಾಂತ್ ಅಭಿನಯದ ಅಣ್ಣಾಥೆ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ’ ಎಂದು ಬರೆದುಕೊಂಡಿದ್ದಾರೆ.
After a rainy morning, the evening & night shows of superstar #Rajinikanth‘s #Annaatthe witnessed uptrend & reported good occupancy in many places.
— Manobala Vijayabalan (@ManobalaV) November 8, 2021
‘ಅಣ್ಣಾಥೆ’ ಸಿನಿಮಾವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿದೆ. ರಜನಿಕಾಂತ್, ಕೀರ್ತಿ ಸುರೇಶ್, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬಂದಿದೆ. ಚಿತ್ರಕ್ಕೆ ಎಲ್ಲ ಕಡೆಗಳಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.
ಇದನ್ನೂ ಓದಿ: ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ ‘ಅಣ್ಣಾಥೆ’; ಬಾಕ್ಸ್ ಆಫೀಸ್ ಉಡೀಸ್ ಮಾಡಿದ ರಜನಿ ಸಿನಿಮಾ
ಮಾದಕ ನಟಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು; ಪತಿಯನ್ನು ಬಂಧಿಸಿದ ಪೊಲೀಸರು