ಬಾಗಲಕೋಟೆಯಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬಾಗಲಕೋಟೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಜಿಲ್ಲೆ ಗುಳೇದಗುಡ್ಡ ತಾಲ್ಲೂಕಿನ ನಾಗರಾಳದಲ್ಲಿ ನಡೆದಿದೆ.

ಆಸ್ಪತ್ರೆಗೆ ದಾಖಲಾದ 25 ಮಂದಿಯಲ್ಲೂ ವಾಂತಿ ಬೇಧಿ ಕಾಣಿಸಿಕೊಂಡಿದೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ಒಡೆದು ನೀರು ಕಲುಷಿತಗೊಂಡಿದೆ ಎನ್ನಲಾಗಿದೆ. ಗುಳೇದಗುಡ್ಡ ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯನ್ನ ಅವಲೋಕಿಸುತ್ತಿದ್ದಾರೆ.

News First Live Kannada

Leave a comment

Your email address will not be published. Required fields are marked *