ಗದಗ: ಟ್ರ್ಯಾಕ್ಟರ್ ಮೇಲಿಂದ ಆಯತಪ್ಪಿ ಬಿದ್ದು ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ನಡೆದಿದೆ.
ಶೋಭಾ ಹಂಗನಕಟ್ಟಿ (10) ಮೃತ ಬಾಲಕಿಯಾಗಿದ್ದು, ಶಾಲೆಗೆ ಹೊರಟ್ಟಿದ್ದ ಸಂದರ್ಭದಲ್ಲಿ ಬಸ್ ಬಾರದ ಹಿನ್ನೆಲೆ ವಿದ್ಯಾರ್ಥಿನಿ ಅದೇ ಮಾರ್ಗದಲ್ಲಿ ಬಂದಿದ್ದ ಟ್ರ್ಯಾಕ್ಟರ್ ಏರಿ ಶಾಲೆಗೆ ಹೋರಟಿದ್ದಳು. ಹೊಸಳ್ಳಿಯಿಂದ ಕಡಕೋಳ ಸರ್ಕಾರಿ ಶಾಲೆಗೆ ಟ್ರ್ಯಾಕ್ಟರ್ ಏರಿ ಹೊರಟಿದ್ದ ವೇಳೆ ಮಾರ್ಗ ಮಧ್ಯೆದ ತಿರುವಿನಲ್ಲಿ ಆಯತಪ್ಪಿ ಟ್ರ್ಯಾಕ್ಟರ್ನಿಂದ ನೆಲಕ್ಕೆ ಉರುಳಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಶಾಲೆಗೆ ಹೋಗೋ ಮಕ್ಕಳು ಸಮಸ್ಯೆ ಎದುರಿಸುತ್ತಿದ್ದು, ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಗ್ರಾಮಸ್ಥರು ಮನವಿ ಮಾಡಿದ್ದರೂ ಕೂಡ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿರಲಿಲ್ಲ. ಎನ್ಡಬ್ಲ್ಯೂಕೆಎಸ್ಆರ್ಟಿಸಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈಗ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಶಿಹರಟ್ಟಿ ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.