ಬೆಂಗಳೂರು : ಕರ್ನಾಟಕ ಬ್ಯೂಟಿ ರಶ್ಮಿಕಾ ಮಂದಣ್ಣ ಕೈನಲ್ಲಿ ಸಾಕಷ್ಟು ಚಿತ್ರಗಳಿವೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಕೊಡಗಿನ ಕುವರಿ ದಕ್ಷಿಣ ಭಾರತದ ಸಿನಿಮಾಗಳ ಜೊತೆಗೆ ಬಾಲಿವುಡ್ ನಲ್ಲಿಯೂ ಮಿಂಚುತ್ತಿದ್ದಾರೆ. ಈ ಹಿಂದೆ ಎರಡು ಸಿನಿಮಾಕ್ಕೆ ಸಹಿ ಹಾಕಿರುವ ಕಿರಿಕ್ ಪಾರ್ಟಿ ಬೆಡಗಿ ಇದೀಗ ಬಿ-ಟೌನ್ ನ ಮೂರನೇ ಸಿನಿಮಾದಲ್ಲಿ ನಟಿಸುವುದಾಗಿ ತಿಳಿಸಿದ್ದಾರೆ.

ಮಿಷನ್ ಮಜ್ನು ಚಿತ್ರದ ಮೂಲಕ ಬಾಲಿವುಡ್  ಚಿತ್ರರಂಗದಲ್ಲಿ ಅವಕಾಶ ಗಿಟ್ಟಿಸಿಕೊಂಡ ಇವರು, ನಟ ಸಿದ್ಧಾರ್ಥ್ ಮಲ್ಹೋತ್ರಾಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ನಟಿಸುವ ಚಿತ್ರದಲ್ಲಿ ಅವರ ಮಗಳ ಪಾತ್ರಕ್ಕೆ ರಶ್ಮಿಕಾ ಬಣ್ಣ ಹಚ್ಚುತ್ತಿದ್ದಾರೆ.

ಇದೀಗ ಬಾಲಿವುಡ್ ನ ತಮ್ಮ ಮೂರನೇ ಸಿನಿಮಾ ಬಗ್ಗೆಯೂ ರಶ್ಮಿಕಾ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತಿಚೆಗೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದ ಅವರು ನಾನು ಬಾಲಿವುಡ್ ನ ಮೂರನೇ ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಆದ್ರೆ ಸಿನಿಮಾ ಯಾವುದು, ನಿರ್ದೇಶಕ ಯಾರು, ತಮ್ಮ ಪಾತ್ರ ಏನು ಎಂಬುದನ್ನು ಅವರು ತಿಳಿಸಿಲ್ಲ.

ಇಷ್ಟೇ ಅಲ್ಲದೆ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ನಟನೆಯ ಪುಷ್ಪಾ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಸದ್ಯ ಆ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ.

ಸಿನೆಮಾ – Udayavani – ಉದಯವಾಣಿ
Read More

Leave a comment