ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಟೀಲ್, ಆಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್​​, ಆಡಿಯೋ ವೈರಲ್​​ ಬಗ್ಗೆ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರಿಯುತ್ತೇನೆ. ಈ ಬಗ್ಗೆ ತನಿಖೆಯಾಗಬೇಕು. ತನಿಖೆಯ ಬಳಿಕ ಆಡಿಯೋದ ಬಗ್ಗೆ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ಯಡಿಯೂರಪ್ಪ ನಮ್ಮ ಮುಖ್ಯಮಂತ್ರಿ ನಮ್ಮ ಸರ್ವಸಮ್ಮತಿಯ ನಾಯಕ.

ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ. ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನೀಡುತ್ತೇನೆ. ಇವತ್ತು ಅಧಿವೇಶನಕ್ಕೆ ಹೋಗುತ್ತಿದ್ದು, ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ತಿಳಿಸಿದರು.

The post ಬಿಎಸ್​​​ವೈ ಪಕ್ಷದ ಆತ್ಮ.. ಈಶ್ವರಪ್ಪ, ಶೆಟ್ಟರ್ ಎರಡು ಕಣ್ಣುಗಳಿದಂತೆ -ಕಟೀಲ್ appeared first on News First Kannada.

Source: newsfirstlive.com

Source link