ಬಿಎಸ್‍ವೈಗೆ ಆಡಳಿತ ನಡೆಸಲು ಆಗುತ್ತಿಲ್ಲ,ಅವರ ಪುತ್ರ ಆಡಳಿತ ನಡೆಸುತ್ತಿದ್ದಾರೆ: ಶಾಸಕ ಶರಣಬಸಪ್ಪ ದರ್ಶನಾಪುರ

ಯಾದಗಿರಿ: ರಾಜ್ಯದಲ್ಲಿ ಸಿಎಂ ಆಗಿ ಬಿಎಸ್‍ವೈ ಅವರಿಗೆ ಆಡಳಿತ ನಡೆಸಲು ಆಗುತ್ತಿಲ್ಲ, ಅವರ ಬದಲಾಗಿ ಸಿಎಂ ಪುತ್ರ ಆಡಳಿತ ನಡೆಸುತ್ತಿದ್ದಾರೆ ಎಂದು ಆಡಳಿತ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಕಿಡಿಕಾರಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ದೋರನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ವೈ ಅವರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ,ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ರಾಜ್ಯಕ್ಕೆ ಉತ್ತಮವಾಗಿದೆ. ಬಿಜೆಪಿ ಪಕ್ಷ ಯಾರನ್ನು ಸಿಎಂ ಮಾಡುತ್ತಾರೆ ಬಿಜೆಪಿ ಪಕ್ಷಕ್ಕೆ ಬಿಟ್ಟ ವಿಚಾರ ಸಿಗುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇಂಧನ ಬೆಲೆ ಜಾಸ್ತಿ ಆದಂತೆ ಎಲ್ಲಾ ಸರಕು ಮತ್ತು ಸೇವೆಗಳ ಬೆಲೆ ಜಾಸ್ತಿಯಾಗುತ್ತದೆ. ಹೀಗಾಗಿ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ತರಬೇಕು ಎಂದು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

The post ಬಿಎಸ್‍ವೈಗೆ ಆಡಳಿತ ನಡೆಸಲು ಆಗುತ್ತಿಲ್ಲ,ಅವರ ಪುತ್ರ ಆಡಳಿತ ನಡೆಸುತ್ತಿದ್ದಾರೆ: ಶಾಸಕ ಶರಣಬಸಪ್ಪ ದರ್ಶನಾಪುರ appeared first on Public TV.

Source: publictv.in

Source link