ಬಿಗಿ ಭದ್ರತೆಯೊಂದಿಗೆ ಮುರುಘಾ ಶ್ರೀಗಳನ್ನು ಕೋರ್ಟ್​ಗೆ ಹಾಜರುಪಡಿಸಿದ ಪೊಲೀಸರು | POCSO Case police will present Murugha Shri to the Chitradurga District court


ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಮುರುಘಾ ಮಠದ ಶ್ರೀಗಳನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಸೆಷನ್ಸ್​ ನ್ಯಾಯಲಯದ ಮೇರೆಗೆ ಪೊಲೀಸರು ಶ್ರೀಗಳನ್ನು ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ಬಿಗಿ ಭದ್ರತೆಯೊಂದಿಗೆ ಮುರುಘಾ ಶ್ರೀಗಳನ್ನು ಕೋರ್ಟ್​ಗೆ ಹಾಜರುಪಡಿಸಿದ ಪೊಲೀಸರು

ಮುರುಘಾ ಮಠದ ಶ್ರೀ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಮುರುಘಾ ಮಠದ ಶ್ರೀಗಳನ್ನು ಪೊಲೀಸರು 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಬಂಧನದ ನಂತರ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆ ಕೋರ್ಟ್​ಗೆ ಮಾಹಿತಿಯನ್ನೂ ನೀಡದೆ ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಕೋರ್ಟ್, ಕೂಡಲೇ ಆರೋಪಿಯನ್ನು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಸೂಚಿಸಿತ್ತು. ಅದರಂತೆ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

ಹೃದಯದ ಆರೋಗ್ಯ ಸಮಸ್ಯೆ ಕಂಡುಬಂದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಸ್ವಾಮೀಜಿಯನ್ನು ಪೊಲೀಸರು 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಹಾಜರುಪಡಿಸಿದ್ದಾರೆ. ಬಿಗಿ ಪೊಲೀಸ್ ಭದ್ರತೆ ಮೂಲಕ ಪೊಲೀಸ್ ವಾಹನದಲ್ಲೇ ಕರೆದೊಯ್ದು ನ್ಯಾಯಾಧೀಶರ ಮುಂದೆ ಹಾಜರು ಮಾಡಲಾಯಿತು.

ಲೈಂಗಿಕ ದೌರ್ಜನ್ಯದ ಆರೋಪದಡಿ ಬಂಧಿತರಾಗಿರುವ ಮುರುಘಾ ಶರಣರಿಗೆ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಇತ್ತ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಶ್ರೀಗಳನ್ನು ಒಂದುದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅದರಂತೆ ಇಂದು ಮತ್ತೆ ಪೊಲೀಸರು ಕೋರ್ಟ್ ಮುಂದೆ ಹೋಗಿ ಆರೋಪಿಯನ್ನು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು.

ಪೊಲೀಸರು ಮನವಿ ಮಾಡುತ್ತಿದ್ದಂತೆ ಕೋರ್ಡ್, ಆರೋಪಿ ಎಲ್ಲಿ ಎಂದು ಪ್ರಶ್ನಿಸಿದೆ. ಈ ವೇಳೆ ಪೊಲೀಸರು ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ನ್ಯಾಯಾಲಯವು, ಕೋರ್ಟ್​ಗೆ ಯಾವುದೇ ಮಾಹಿತಿ ನೀಡದೆ ಹೇಗೆ ಆಸ್ಪತ್ರೆಗೆ ದಾಖಲಿಸಿದ್ದೀರಿ ಎಂದು ಪ್ರಶ್ನಿಸಿ ಖುದ್ದು ಆರೋಪಿಯನ್ನು ಹಾಜರುಪಡಿಸುವಂತೆ ಆರೋಪಿ ಖುದ್ದು ಹಾಜರಿಗೆ ಸೂಚಿಸಿದ್ದ ಸೆಷನ್ಸ್​ ನ್ಯಾಯಲಯ ಸೂಚಿಸಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.