ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆ ಒಂದರಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಎ.ಮಂಜು ಸಿದ್ದರಾಮಯ್ಯರನ್ನ ಭೇಟಿ ಆಗಿದ್ದಾರೆ.
ನಿನ್ನೆ ರಾತ್ರಿ ಸಿದ್ದರಾಮಯ್ಯರ ಸರ್ಕಾರಿ ನಿವಾಸದಲ್ಲಿ ಎ.ಮಂಜು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೆಲವು ವರದಿಗಳ ಪ್ರಕಾರ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 2023ರ ವಿಧಾನಸಭೆ ಚುನಾವಣೆಯನ್ನ ಗುರಿಯಾಗಿಸಿಟ್ಟುಕೊಂಡು ಎಂ.ಮಂಜು ಅವರನ್ನ ಅತೀ ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
ಈ ಕಾಂಗ್ರೆಸ್ನಲ್ಲಿಯೇ ಇದ್ದ ಎ.ಮಂಜು 2019 ಮಾರ್ಚ್ನಲ್ಲಿ ಬಿಜೆಪಿ ಸೇರಿದ್ದರು. ಇದೀಗ ಮತ್ತೆ ಬಿಜೆಪಿಯಿಂದ ಕಾಂಗ್ರೆಸ್ ಸೇರುತ್ತಾರೆ ಅನ್ನೋ ವದಂತಿ ತುಂಬಾ ದಿನದಿಂದ ಇದೆ.
The post ಬಿಜೆಪಿಗೆ ‘ಕೈ’ಎತ್ತಿದ ಎ.ಮಂಜು; ಶೀಘ್ರದಲ್ಲೇ ಮತ್ತೆ ಕಾಂಗ್ರೆಸ್ಗೆ ಸೇರ್ಪಡೆ..? appeared first on News First Kannada.