ಮಂಗಳೂರು: ಬಿಜೆಪಿಯಲ್ಲಿ ನಾಯಕರ ಕೊರತೆ ಇಲ್ಲ, ನಮ್ಮ ಸರ್ವ ಸಮ್ಮತಿಯ ನಾಯಕ ಬಿ.ಎಸ್.ಯಡಿಯೂರಪ್ಪ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಪಕ್ಷಾಂತರ ಮಾಡಿ. ಯಾರದ್ದೋ ಕಾಲು ಹಿಡಿದು ಮುಖ್ಯಮಂತ್ರಿಯಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದರು. ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಬಳಿಕ ಸಮರ್ಥ ನಾಯಕನಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಳಿನ್ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ಮುಂಚೆ ಎಲ್ಲಿದ್ರು? ಯಾರು ಅವರ ಗುರು ಆಗಿದ್ರು? ಕಾಂಗ್ರೆಸ್ ಗೆ ಬೈದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬಂದು ಮುಖ್ಯಮಂತ್ರಿ ಆಗಿದ್ದನ್ನು ಜಗತ್ತು ನೋಡಿದೆ. ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ. ಅವತ್ತು ಸಮ್ಮಿಶ್ರ ಸರ್ಕಾರ ರಚನೆ ಮಾಡಿದಾಗ ರಾಹುಲ್ ಗಾಂಧಿಯವರು ಕುಮಾರಸ್ವಾಮಿ ಕೈಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ದರು. ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕ ಇಲ್ಲ ಅಂತಾ ಸೋನಿಯಾ ಗಾಂಧಿ ತೀರ್ಮಾನ. ಸಿದ್ದರಾಮಯ್ಯ ಸಮರ್ಥ ನಾಯಕ ಅಲ್ಲ ಅನ್ನೋದು ಹೀಗಾಗಿ ಸಿದ್ದರಾಮಯ್ಯ ಮಾತನಾಡುವಾಗ ಯೋಚನೆ ಮಾಡಬೇಕು ಎಂದು ನಳಿನ್ ತಿರುಗೇಟು ನೀಡಿದರು. ಇದನ್ನೂ ಓದಿ: ಸಿ.ಟಿ.ರವಿ-ನಳಿನ್ ಕುಮಾರ್ ಕಟೀಲ್ 45 ನಿಮಿಷ ಗೌಪ್ಯ ಮಾತುಕತೆ

The post ಬಿಜೆಪಿಯಲ್ಲಿ ಲೀಡರ್ ಕೊರತೆ ಇಲ್ಲ, ಬಿಎಸ್‍ವೈ ಸರ್ವಸಮ್ಮತಿಯ ನಾಯಕ: ನಳಿನ್ ಕುಮಾರ್ ಕಟೀಲ್ appeared first on Public TV.

Source: publictv.in

Source link