ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪರ್ವ ಆರಂಭವಾಗಿರೋ ಬೆನ್ನಲ್ಲೇ ದೊಡ್ಡ ಮಟ್ಟದ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಒಂದು ಕಡೆ ಮುಖ್ಯಮಂತ್ರಿ ತರಾತುರಿಯಲ್ಲಿ ಯೋಜನೆಗಳಿಗೆ ಮಂಜೂರಾತಿ ನೀಡುತ್ತಿದ್ದಾರೆ ಎನ್ನಲಾಗಿದ್ದು, ವಲಸಿಗ ಶಾಸಕರು ತಮ್ಮ ಭವಿಷ್ಯದ ಚಿಂತೆಯಲ್ಲಿ ಮುಳುಗಿದ್ದಾರೆ. ಹೀಗಾಗಿ ಸಹಜವಾಗಿ ಈ ಬೆಳವಣಿಗೆ ರಾಜ್ಯದ ಆಡಳಿತ ವ್ಯವಸ್ಥೆ ಮೇಲೂ ಪರಿಣಾಮ ಬೀರಿದೆ ಎನ್ನಲಾಗ್ತಿದೆ.

ಇದೇ ಹಿನ್ನೆಲೆಯಲ್ಲಿ ತೀಕ್ಷ್ಣ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ರಾಜಕೀಯ ಅಸ್ಥಿರತೆಯು ಕರ್ನಾಟಕದ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಬಿಜೆಪಿಯವರು ಒಳ ಜಗಳದಲ್ಲಿ ಮುಳುಗಿ ಹೋಗಿದ್ದು, ಜನರ ಕುರಿತು ಯೋಚಿಸಲು ಅವರ ಬಳಿ ಸಮಯವಿಲ್ಲದಂತಾಗಿದೆ ಎಂದು ಅವರು ಹರಿ ಹಾಯ್ದಿದ್ದಾರೆ. ಅಲ್ಲದೇ, ಬಿಜೆಪಿ ನಾಯಕರು ಅಧಿಕಾರದ ಹಿಂದೆ ಓಡುತ್ತಿದ್ದರೆ, ಕಾಂಗ್ರೆಸ್‌ ನಿರಂತರವಾಗಿ ಜನರ ಸೇವೆಯಲ್ಲಿ ತೊಡಗಿದೆ ಎಂದೂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

 

The post ‘ಬಿಜೆಪಿ ಒಳಜಗಳದಲ್ಲಿ ಜನರ ಬಗ್ಗೆ ಯೋಚಿಸಲೂ ಸಮಯವಿಲ್ಲ.. ಕಾಂಗ್ರೆಸ್ ಜನಸೇವೆ ಮಾಡ್ತಿದೆ’ appeared first on News First Kannada.

Source: newsfirstlive.com

Source link