ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ನಾಳೆ ನಿರ್ಧಾರ; ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ | HD Kumaraswamy said that BJP JDS alliance will decide tomorrow in mysuru


ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ನಾಳೆ ನಿರ್ಧಾರ; ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ

ಬಿಜೆಪಿ ಮತ್ತು ಜೆಡಿಎಸ್ ಚಿಹ್ನೆ

ಮೈಸೂರು: ವಿಧಾನಪರಿಷತ್ನಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಮೈತ್ರಿ ಸಂಬಂಧ ನಾಳೆ ನಿರ್ಧಾರ ಮಾಡಲಾಗುವುದು. ಯಡಿಯೂರಪ್ಪ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ. ಇದು ನನ್ನ, ಯಡಿಯೂರಪ್ಪ ವೈಯಕ್ತಿಕ ಮೈತ್ರಿಯಾಗಿದೆ ಅಂತ ತಿಳಿಸಿದ್ದಾರೆ. ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದಿದ್ದಾರೆ. ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. ಈ ಎಲ್ಲಾ ಅಂಶ ಮುಂದಿಟ್ಟು ಕೊಂಡು ನಾಳೆ ಬೆಂಬಲದ ತೀರ್ಮಾನ ಮಾಡುವೆ ಅಂತ ಕುಮಾರಸ್ವಾಮಿ ತಿಳಿಸಿದ್ದಾರೆ.

6 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ಸನ್ನಿವೇಶ ಇದೆ. 6 ಕ್ಷೇತ್ರಗಳನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇವೆ. ಮೈಸೂರಿನಲ್ಲಿ ಮೊದಲ ಬಾರಿ ಕಾರ್ಯಾಗಾರದ ಅಂಶಗಳನ್ನು ಅಳವಡಿಕೆ ಮಾಡಲಾಗಿದೆ. ಹಿಂದೆ ಇಲ್ಲಿ ಎರಡು ಬಾರಿ ಜೆಡಿಎಸ್ ಅಭ್ಯರ್ಥಿ ಗೆದ್ದಿದ್ದಾರೆ. ಈ ಬಾರಿ ಕೂಡ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ನನಗಿದೆ. ವರುಣಾ ಕ್ಷೇತ್ರದಲ್ಲೂ ನಾಯಕರ ಕೊರತೆ ನಡುವೆಯೂ ಸಭೆ ಯಶಸ್ವಿ ಆಗಿದೆ. ಇದೆಲ್ಲವನ್ನು ಗಮನಿಸಿದರೆ ಜೆಡಿಎಸ್ ಮುಂದಿನ ಚುನಾಗಣೆಯಲ್ಲೂ ಉತ್ತಮ ಫಲಿತಾಂಶ ಕಾಣಲಿದೆ ಅಂತ ಮೈಸೂರಿನಲ್ಲಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಯಾರು ಯಾವ ಪಕ್ಷಕ್ಕೆ ಬೆಂಬಲ ಕೊಡುತ್ತಾರೆ ನಮಗೆ ಬೇಕಿಲ್ಲ. ನಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೊಸ ನಾಯಕರ ಹುಡುಕಾಟದಲ್ಲಿ ಇದ್ದೇವೆ. ಇದೇ ಅಂಶಕ್ಕೆ ನಾನು ಬದ್ದನಾಗಿದ್ದೇನೆ. ನಮ್ಮ ಕಾರ್ಯಾಕರ್ತರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೊಸ ನಾಯಕರನ್ನು ಹಾಕುವಂತೆ ಕೇಳಿದ್ದಾರೆ. ಹಿಂದೆ ಇದ್ದವರಿಗೂ ರಾಜಕೀಯ ಉಳಿವು ಮುಖ್ಯ. ಜಿಟಿ ದೇವೇಗೌಡರು ಏನು ಸನ್ಯಾಸಿಯಲ್ಲ. ಅದಕ್ಕೆ ಅವರು ಅವರ ತಂಡ ರೆಡಿ ಮಾಡಿಕೊಳ್ಳುತ್ತಿದ್ದಾರೆ. ಮೂರೂ ಪಕ್ಷಗಳಲ್ಲೂ ನಮ್ಮ ಪರ ಕೆಲಸ ಮಾಡುವವರು ಇದ್ದಾರೆ. ಕಾಂಗ್ರೆಸ್, ಬಿಜೆಪಿಯಲ್ಲೂ ನಮ್ಮ ಪರ ಇರುವವರು ಇದ್ದಾರೆ. ನಾಯಕರು ಏನೇ ಹೇಳಿದರೂ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಎರಡನೇ ಪ್ರಾಶಸ್ತ್ಯ ಮತ ಜೆಡಿಎಸ್ಗೆ ಕೊಡುತ್ತಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿ ಗೆಲ್ಲಲು ಜೆಡಿಎಸ್ ಪಾತ್ರ ಬಹಳ ಮುಖ್ಯವಾಗಿದೆ ಅಂತ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

TV9 Kannada


Leave a Reply

Your email address will not be published. Required fields are marked *