ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ; ಟ್ವೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆಕ್ರೋಶ | Ex police commissioner bhaskar rao expresses ire against bjp leaders by tweet


ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ; ಟ್ವೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆಕ್ರೋಶ

ಆಪ್ ಧುರೀಣ ಭಾಸ್ಕರ್ ರಾವ್

ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ. ಮೊನ್ನೆ ಚಂದ್ರು ಸ್ನೇಹಿತ ಸೈಮನ್ ಉರ್ದು ಮಾತನಾಡದ್ದಕ್ಕಾಗಿಯೇ ಕೊಲೆ ಮಾಡಿದ್ರು ಅಂತಾ ಹೇಳಿ, ಇಡೀ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ರೆ. ಇದನ್ನೆ ಇಟ್ಕೊಂಡು ಬಿಜೆಪಿ ನಾಯಕರು ಪೊಲೀಸರ ವಿರುದ್ಧ ಗುಡುಗಿದ್ದಾರೆ. ಸದ್ಯ ಈ ಬಗ್ಗೆ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರು ಬೆಂಗಳೂರಿನ 1 ಕೋಟಿ ಜನರನ್ನ ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ ಎಂದು ಟ್ವಿಟರ್ನಲ್ಲಿ ಬಿಜೆಪಿ ನಾಯಕರ ವಿರುದ್ಧ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರು, ಪೊಲೀಸ್ ಆಯುಕ್ತರನ್ನ ಸುಳ್ಳುಗಾರ ಎಂದಿದ್ದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ತಿನ ಸದಸ್ಯ ರವಿಕುಮಾರ್, ತಮ್ಮ ತಲೆ ಮೇಲೆ ಬರುತ್ತೆ ಎಂದು, ಬೆಂಗಳೂರು ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ. ಗೃಹ ಸಚಿವರು ಹೇಳಿದ್ದು ಸರಿ ಇದೆ. ಉರ್ದು ಬರಲ್ಲ ಅಂದಿದ್ದಕ್ಕೆ ಚಂದ್ರುನನ್ನ ಕೊಲೆ ಮಾಡಲಾಗಿದೆ. ಯುವಕ ಚಂದ್ರು ಹತ್ಯೆ ಮಾಡಿರುವುದು ಗೂಂಡಾ ಮುಸ್ಲಿಮರು. ಬೈಕ್ಗೆ ಆ್ಯಕ್ಸಿಂಡೆಂಟ್ ಆಗಿದ್ದು ನಿಜ, ಆಗ ಗಲಾಟೆ ನಡೆದಿದೆ. ಉರ್ದುವಿನಲ್ಲಿ ಮಾತನಾಡಿ ಎಂದು ಚಂದ್ರುಗೆ ಹೇಳಿದ್ದಾರೆ. ಉರ್ದು ನಹೀ ಹೈ ಅಂತ ಹೇಳಿದಾಗ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದರು. ಅಲ್ಲದೆ ಬಿಜೆಪಿಯ ಕೆಲ ನಾಯಕರು ಪೊಲೀಸ್ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.

TV9 Kannada


Leave a Reply

Your email address will not be published.