ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಮೇಲೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬನಶಂಕರಿಯ ಮನೆ ಬಳಿ ಸ್ಟೇಜ್ ಪ್ರೊಗ್ರಾಂ ಮಾಡಿ ಜನರನ್ನ ಸೇರಿಸಿ ಹುಟ್ಟುಹಬ್ಬ ಆಚರಿಸಿದ್ದರು. ಈ ಹಿನ್ನೆಲೆಯಲ್ಲಿ ಎನ್ಡಿಎಂಎ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬರ್ತ್ ಡೇ ಆಚರಣೆ ವೇಳೆ ಸಾಕಷ್ಟು ಜನರು ಸೇರಿದ್ದರು. ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರವಿಲ್ಲದೆ ಹುಟ್ಟುಹಬ್ಬ ಆಚರಣೆ ನಡೆದಿತ್ತು.
The post ಬಿಜೆಪಿ ನಾಯಕ ಎನ್.ಆರ್.ರಮೇಶ್ ವಿರುದ್ಧ FIR ದಾಖಲು appeared first on News First Kannada.