
ಹೆಚ್ ಡಿ ಕುಮಾರಸ್ವಾಮಿ
ಈ ತಿಂಗಳ 13ನೇ ತಾರೀಖು ಮುಗಿದ ಜಲಧಾರೆ ಸಮಾರೋಪ ಸಮಾವೇಶದ ಬಗ್ಗೆ 6 ದಿನ ಅಧ್ಯಯನ ಮಾಡಿ ಟ್ವೀಟ್ ಮಾಡಿದೆ ಬಿಜೆಪಿ. ಇನ್ನು ಆರಂಭವಾಗದ ಪಂಚರತ್ನ ಯಾತ್ರೆ ಬಗ್ಗೆ ಆಗಲೇ ಏರಿದೆ ಬೀಪಿ. ಮಿಷನ್ 123 ನಮ್ಮ ಗುರಿ. ನಿಮಗೆ ಯಾಕೆ ಉರಿ? ಎಂದು ಹೆಚ್ಡಿಕೆ ಬಿಜೆಪಿಗೆ ಪಂಚ್ ಕೊಟ್ಟಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ಭಾರತೀಯ ಜನತಾ ಪಕ್ಷ ಎಂದರೆ ಬುರುಡೆ ಪಾರ್ಟಿ. ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದವರು ಈಜುಕೊಳ ಮಾಡಿದ್ದಾರೆ. ಭವ್ಯ ಬೆಂಗಳೂರನ್ನು ಸ್ವಿಮ್ಮಿಂಗ್ ಪೂಲ್ ಮಾಡುತ್ತಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್ಡಿಕೆ ವಾಗ್ದಾಳಿ
ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. ‘ಬಿಜೆಪಿ ಎಂಬ ಬುರುಡೆ ಪಾರ್ಟಿ ‘ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ. ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟವರು ಕೆಂಪೇಗೌಡರು ಕಟ್ಟಿದ ಭವ್ಯ ಬೆಂಗಳೂರು ನಗರವನ್ನು ಸ್ವಿಮ್ಮಿಂಗ್ ಪೂಲ್ ಮಾಡುತ್ತಿದ್ದಾರೆ! ರಸ್ತೆಗಳು ರಾಜ ಕಾಲುವೆಗಳಾಗಿ, ಮನೆಗಳು ಕೆರೆಗಳಾಗಿವೆ ಎಂದು ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.