ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ; ಎಡಿಜಿಪಿ ಅಲೋಕ್ ಕುಮಾರ್ | BJP Youth leader Praveen Nettar Murder case ADGP Alok Kumar visit Bellare Police station


ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. 

ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ; ಎಡಿಜಿಪಿ ಅಲೋಕ್ ಕುಮಾರ್

ಅಲೋಕ್​ ಕುಮಾರ್, ಎಡಿಜಿಪಿ

ದಕ್ಷಿಣ ಕನ್ನಡ: ಬಿಜೆಪಿ (BJP) ಯುವ ಮುಖಂಡ ಪ್ರವೀಣ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ ಎಂದು ಮಂಗಳೂರಿನಲ್ಲಿ (Mangalore) ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಹೇಳಿದ್ದಾರೆ. ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ. ಮುಖ್ಯ ಆರೋಪಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಹಕಾರ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಎನ್​ಐಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

ಇಂದು (ಆಗಸ್ಟ್ 10) ಬೆಳ್ಳಾರೆ ಪೊಲೀಸ್ ಠಾಣೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಐಜಿಪಿ ದೇವಜ್ಯೋತಿ ರೇ, ಎಸ್​​​​ಪಿ ಹೃಷಿಕೇಶ್ ಸೋನಾವಣೆ, ಡಿವೈಎಸ್​​​ಪಿ ಗಾನಾ ಕುಮಾರಿ ಇದ್ದರು. ಈ ವೇಳೆ ಅಲೋಕ್ ಕುಮಾರ್ ಬಂಧಿತ ಆರೋಪಿಗಳ ಬಗ್ಗೆ ತನಿಖಾಧಿಕಾರಿ ಗಾನಾ ಕುಮಾರಿಯಿಂದ ಮಾಹಿತಿ ಮಾಹಿತಿ ಪಡೆದಿದ್ದಾರೆ. ಹಾಗೇ  ಎಡಿಜಿಪಿ ಅಲೋಕ್ ‌ಕುಮಾರ್ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಅವರು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಎನ್​​ಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಮುಟ್ಟುಗೋಲು ಹಾಕಿಕೊಳ್ಳುವ  ಕೆಲಸ ಮಾಡಲಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ. ಆವಾಗವಾಗ ಅವರ ಸ್ಥಳಬದಲಾವಣೆ ಮಾಡಲಾಗುತ್ತಿದೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದರು.

ಆರೋಪಿಗಳಿಗೆ ಪಿಎಫ್ಐ ಲಿಂಕ್ ಇದೆ ಎಂಬ ವಿಚಾರವಾಗಿ ಮಾತನಾಡಿದ ಅವರು ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ. ದಾಖಲೆ ಜೊತೆಗೆ ಮಾತನಾಡುತ್ತೇವೆ, ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್​ಐ ಲಿಂಕ್ ಇದೆ ಎಂದರು.

ಈ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ. ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್ಐ ಲಿಂಕ್ ಇದೆ ಎಂಬುವುದರ ಬಗ್ಗೆ ಹೇಳುತ್ತೇವೆ. ಈಗಾಗಲೇ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ಸಂಧರ್ಭದಲ್ಲಿ ಪ್ರಕರಣಕ್ಕೆ ಕೇರಳ ಲಿಂಕ್ ಇರುವ ಬಗ್ಗೆ ಹೇಳಲು ಸಾಧ್ಯವಿಲ್ಲ. ಈಗ ಬಂಧನವಾಗಿರುವ ಏಳು ಮಂದಿಯೂ ಸ್ಥಳೀಯರೇ ಆಗಿದ್ದಾರೆ. ಅವರಿಗೆ ನಿರ್ದೇಶನ ಕೊಟ್ಟಿರೋದು ಯಾರು ಎಂಬುವುದರ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಳ್ಳಾರೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಸಭೆಯನ್ನು ಮಾಡುತ್ತೇವೆ. ಎನ್​ಐಎ ಅಧಿಕಾರಿಗಳು, ಮಂಡ್ಯ, ಚಾಮರಾಜನಗರ ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಎಸ್ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದು ಮಾತನಾಡಿದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *