ರಾಮನಗರ: ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಾರು ಅಪಘಾತಕ್ಕೀಡಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಚನ್ನಪಟ್ಟಣದ ಮುಗಿಗೆರೆ ಗ್ರಾಮದ ಸಮೀಪ ಕಾರು ಪಲ್ಟಿಯಾಗಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಷಾತ್ ಯಾರಿಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರತಾಪ್ ಸಿಂಹ, ಪತ್ನಿ ಮತ್ತು ಮಗಳು ಸೇರಿ 6 ಜನ ಕಾರ್ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳು ಆಗಿವೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಾರು ಅಪಘಾತ
